ಖಾಸಗಿ ಕಾಲೇಜು ಆಡಳಿತ ಮಂಡಳಿ ಸಂಘ ಅಧ್ಯಕ್ಷರಾಗಿ ಡಾ.ಯಶೋವರ್ಮ ಆಯ್ಕೆ

yashovarma
Published on

ಉಡುಪಿ: ಮಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳನ್ನೊಳಗೊಂಡ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷರಾಗಿ ಉಜಿರೆಯ ಎಸ್.ಡಿ.ಎಂ. ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಮಣಿಪಾಲ ಮಾಧವ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ ಶೆಟ್ಟಿ ಉಪಾಧ್ಯಕ್ಷರಾಗಿ, ಪುತ್ತೂರು ವಿವೇಕಾನಂದ ಬಿ.ಎಡ್. ಕಾಲೇಜಿನ ಅಧ್ಯಕ್ಷ ಪ್ರೊ. ಎ.ವಿ. ನಾರಾಯಣ್ ಕಾರ್ಯದರ್ಶಿಯಾಗಿ, ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಎಂ. ವೆಂಕಟ್ ರಾವ್ ಕೋಶಾಧಿಕಾರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿಯ ಸದಸ್ಯರು: ಕೊಡಗಿನ ಕಾವೇರಿ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಕೆ. ಎನ್ ಉತ್ತಪ್ಪ, ಮಂಗಳೂರು ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶಿನಿನಿಲಯ ಕಾರ್ಯದರ್ಶಿ ಪ್ರೊ.ಎವೆಲಿನ್ ಬೆನಿಸ್ ಮತ್ತು ಮಣಿಪಾಲದ ಮಾಧವ ಪೈ ಮೆಮೋರಿಯಲ್ ಕಾಲೇಜಿನ ಪಿ. ದಯಾನಂದ ಶೆಟ್ಟಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net