

ವಿಜಯವಾಣಿ ಸುದ್ದಿಜಾಲ ಉಡುಪಿ
ಉಡುಪಿ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನರಿಗೆ ತೀವ್ರ ತೊಂದರೆಯಾಗಿದ್ದು, ತಗ್ಗು ಪ್ರದೇಶದ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿದೆ. ಪ್ರತಿ ವರ್ಷವೂ ಮಳೆಗಾಲ ಆರಂಭವಾಗುತ್ತಿದ್ದಂತೆ ಇದೇ ಸಮಸ್ಯೆ ಪುನರಾವರ್ತನೆ ಆಗುತ್ತಿದ್ದು, ಕೆಲವರು ಅತಿಕ್ರಮ ಮಾಡಿಕೊಂಡಿರುವ ರಾಜಕಾಲುವೆ ಅಥವಾ ಪ್ರಮುಖ ತೋಡುಗಳನ್ನು ಯಾವುದೇ ಮುಲಾಜಿಲ್ಲದೆ ಅಧಿಕಾರಿಗಳು ತೆರವು ಮಾಡಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಸೂಚಿಸಿದ್ದಾರೆ.
ಉಡುಪಿ-ಮಣಿಪಾಲ ರಸ್ತೆ ಮಾರ್ಗದ ಲಕ್ಷ್ಮೀಂದ್ರ ನಗರದಲ್ಲಿ ಹಾನಿಗೊಂಡ ಪ್ರದೇಶಕ್ಕೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿ, ಮಾತನಾಡಿದರು.