ಯಶ್‌ಪಾಲ್ ಸುವರ್ಣರ ಹೇಳಿಕೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ

 ಕಾಂಗ್ರೆಸ್ ನಗರ ಅಧ್ಯಕ್ಷೆ ಎಸ್. ಅಪ್ಪಿ,  ಮುಖಂಡರಾದ ವೀಣಾ, ಶಶಿಕಲಾ, ಚಂದ್ರಕಲಾ, ವೃಂದಾ ಪೂಜಾರಿ ಇದ್ದರು.
ಕಾಂಗ್ರೆಸ್ ನಗರ ಅಧ್ಯಕ್ಷೆ ಎಸ್. ಅಪ್ಪಿ, ಮುಖಂಡರಾದ ವೀಣಾ, ಶಶಿಕಲಾ, ಚಂದ್ರಕಲಾ, ವೃಂದಾ ಪೂಜಾರಿ ಇದ್ದರು.
Published on
ಮಂಗಳೂರು: ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಅವರು ಬಳಸಿರುವ ಭಾಷೆ ಮತ್ತು ವೈಯಕ್ತಿಕ ಆರೋಪಗಳು ಖಂಡನೀಯ, ಬೇಜವಾಬ್ದಾರಿಯುತ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ದವಾಗಿವೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಯಾವುದೇ ಸಾಕ್ಷ್ಯಾಧಾರವಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ಆರೋಪ ಮಾಡುವುದು ರಾಜಕೀಯ ಸಂಸ್ಕೃತಿಯಲ್ಲ. ದೇಶದ ಪ್ರಮುಖ ನಾಯಕರ ವಿರುದ್ಧ ವೈಯಕ್ತಿಕ ನಿಂದನೆಗಳನ್ನು ಮಾಡುವ ಬದಲು, ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದು ಜನಪ್ರತಿನಿಧಿಗಳ ಜವಾಬ್ದಾರಿ ಎಂದವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಯಶ್‌ಪಾಲ್ ಸುವರ್ಣ ಅವರು ಬಳಕೆ ಮಾಡಿರುವ ಭಾಷೆ ರಾಜಕೀಯ ಭಿನ್ನಾಭಿಪ್ರಾಯವಲ್ಲ; ಅದು ದ್ವೇಷ, ಪ್ರಚೋದನೆ ಮತ್ತು ಪ್ರಜಾಪ್ರಭುತ್ವದ ಸಂಸ್ಕೃತಿಗೆ ವಿರುದ್ಧವಾದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಇರಬಹುದು, ಆದರೆ ಬೆದರಿಕೆ ಅಥವಾ ಹಿಂಸೆಯನ್ನು ಸೂಚಿಸುವ ಮಾತುಗಳಿಗೆ ಯಾವುದೇ ಸ್ಥಾನವಿಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಂತಹ ಹೇಳಿಕೆಗಳನ್ನು ಖಂಡಿಸುತ್ತದೆ. ಯಶ್‌ಪಾಲ್ ಸುವರ್ಣ ಅವರು ತಮ್ಮ ಮಾತುಗಳನ್ನು ಹಿಂತೆಗೆದುಕೊಂಡು ದೇಶದ ಜನರ ಕ್ಷಮೆ ಕೇಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಇಂತಹ ಹೇಳಿಕೆಗಳ ಕುರಿತು ಕಾನೂನುಬದ್ಧವಾಗಿ ಪರಿಶೀಲನೆ ನಡೆಸಬೇಕೆಂದು ಅವರು ಆಗ್ರಹಿಸಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸತ್ಯ, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸೌಹಾರ್ದತೆಯ ಪರವಾಗಿ ತನ್ನ ಹೋರಾಟವನ್ನು ಎಂದಿನಂತೆ ಮುಂದುವರಿಸಲಿದೆ. ವೈಯಕ್ತಿಕ ನಿಂದನೆ, ಬೆದರಿಕೆ ಮತ್ತು ದ್ವೇಷದ ರಾಜಕಾರಣಕ್ಕೆ ನಾವು ಎಂದಿಗೂ ಮಣಿಯುವುದಿಲ್ಲ ಎಂದು ವಿವರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net