ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋಗೆ ವಾಮಾಚಾರ : ಪ್ರಚಾರದ ಗಿಮಿಕ್ ಎಂದ ಡಾ.ಯತೀಂದ್ರ ಸಿದ್ದರಾಮಯ್ಯ

Yathindra Siddaramaiah
Published on

ಮೈಸೂರು: ಪ್ರಚಾರ ಪಡೆದುಕೊಳ್ಳುವ ಉದ್ದೇಶದಿಂದ ಆರ್‌ಟಿಐ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಫೋಟೋಗೆ ವಾಮಾಚಾರ ಮಾಡಲಾಗಿದೆ. ಇದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳಲಿಕ್ಕೆ ಹೋಗಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮದವರ ಗಮನ ಸೆಳೆಯಲು ಇಂತಹ ಗಿಮಿಕ್ ನಡೆಯುತ್ತದೆ. ಜಾರಿ ನಿರ್ದೇಶನಾಲಯದವರು ಆಗಿಂದಾಗೆ ದುರುದ್ದೇಶಪೂರ್ವಕವಾಗಿ ಹೇಳಿಕೆ ಕೊಡುತ್ತಾರೆ. ಜಾರಿ ನಿರ್ದೇಶನಾಲಯ ಮಾಡುತ್ತಿರುವ ಆರೋಪಕ್ಕೆ ಯಾವುದೇ ಆಧಾರ ನೀಡಿಲ್ಲ, ಮನಸ್ಸಿಗೆ ಬಂದಂತೆ ಆರೋಪ ಮಾಡ್ತಾರೆ. ಹಾಗಾಗಿ ನಾವು ಚಾಲೆಂಜ್ ಮಾಡುತ್ತೇವೆ. ಜಾರಿ ನಿರ್ದೇಶನಾಲಯ ನಿಷ್ಪಪಕ್ಷಪಾತವಾಗಿ ತನಿಖೆ ಮಾಡುವುದಿಲ್ಲ ಎಂಬುದು ದೇಶಕ್ಕೆ ಗೊತ್ತಿದೆ. ಕೇಂದ್ರದ ಎಲ್ಲ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿವೆ ಎಂದು ಟೀಕಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net