

ನಂಜನಗೂಡು: ಹಸು ತೊಳೆಯಲೆಂದು ಹೋಗಿದ್ದ ಮೂವರು ಕೆರೆಗೆ ಬಿದ್ದು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ತಾಲೂಕಿನ ಕಾಮಹಳ್ಳಿ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಗುರುವಾರ ಮೃತರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ಡಾ.ಯತೀಂದ್ರ ಮನೆಯವರಿಗೆ ಧೈರ್ಯ ತುಂಬಿದರಲ್ಲದೆ, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿ ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ ಹಾಜರಿದ್ದರು.