ಯತ್ನಾಳ್ ಹೊರಗಿನವರಲ್ಲ, ನಮ್ಮವರೇ: ಯಡಿಯೂರಪ್ಪ

ex cm b.s.Yeddyurappa
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Published on

ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಆ ರೀತಿ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಕೂತು ಬಗೆಹರಿಸುತ್ತದೆಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ. ಏನೇ ಭಿನ್ನಾಭಿಪ್ರಾಯವಿದ್ದರೂ ಎದುರು ಕೂತು ಒಟ್ಟಾಗಿ ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲವೂ ಸರಿಯಾಗುತ್ತದೆಂಬ ವಿಶ್ವಾಸವಿದೆ ಎಂದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮೂಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆಬರುತ್ತಿವೆ. ನಿವೇಶನ ವಾಪಾಸ್ ನೀಡಿದ್ದರೂ ಅಪರಾಧ ಅಪರಾಧವೇ ಆಗಿದೆ. ಮೂಡಾದಲ್ಲಿ ಸಾವಿರಾರು ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪವಿದೆ. ಇಡಿ(ಜಾರಿ ನಿರ್ದೇಶನಾಲಯ) ರಂಗಕ್ಕೆ ಇಳಿಯಬೇಕಾದರೆ ಸೂಕ್ತ ಸಾಕ್ಷೃವಿಲ್ಲದೇ ಅವರು ಬರುವುದಿಲ್ಲ. ಸಾಕಷ್ಟು ಪುರಾವೆ ಸಿಕ್ಕಿದ್ದರಿಂದಲೇ ಇಡಿ ಪ್ರವೇಶ ಮಾಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net