ನ್ಯಾಯಾಲಯ ಸಂಕೀರ್ಣ ಉದ್ಘಾಟನೆ ಶೀಘ್ರ

ylb photo 01
ಯಲಬುರ್ಗಾದಲ್ಲಿ ವಕೀಲರ ಸಂಘದಿಂದ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಪಿ.ಸುಧಾ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ. ಸಿ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರಂಗಸ್ವಾಮಿ ಜೆ. ಮತು ಪ್ರಧಾನ ಸಿವಿಲ್ ನ್ಯಾಯಧೀಶ ಸಂಜೀವಕುಮಾರ ಪಾಚ್ಚಪುರೆ ಇತರರಿದ್ದರು.
Published on

ಯಲಬುರ್ಗಾ: ಪಟ್ಟಣದಲ್ಲಿ ಅಂತಿಮ ಹಂತದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆ ದಿನ ಶೀಘ್ರದಲ್ಲಿಯೇ ನಿಗದಿಪಡಿಸಲಾಗುವುದು ಎಂದು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಪಿ.ಸುಧಾ ತಿಳಿಸಿದರು.

ಪಟ್ಟಣದಲ್ಲಿರುವ ನ್ಯಾಯಾಲಯದ ನೂತನ ಕಟ್ಟಡ ಇತ್ತೀಚೆಗೆ ವೀಕ್ಷಿಸಿ ಮಾತನಾಡಿದರು. ಸಮಾಜದಲ್ಲಿ ವಕೀಲರ ಪಾತ್ರ ಬಹಳ ಮುಖ್ಯವಾಗಿದೆ. ಯಲಬುರ್ಗಾ ತಾಲೂಕು ನ್ಯಾಯಾಂಗ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದೆ ಎಂದರು.

ಮನವಿ ಸಲ್ಲಿಕೆ: ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಹೊಂಬಳ ಅವರು ಯಲಬುರ್ಗಾದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪಿಸಬೇಕು. ಕಲ್ಯಾಣ ಕರ್ನಾಟಕ ಭಾಗದ ವಕೀಲರಿಗೆ ಅನುಚ್ಛೇದ 371(ಜೆ) ಅನುಸಾರವಾಗಿ ರಾಜ್ಯ ದಿವಾಣಿ ನ್ಯಾಯಾಧೀಶರ ನೇಮಕಾತಿಯಲ್ಲಿ ಮೀಸಲಾತಿ ಕೊಡಬೇಕು.

ಇತರೆ ನ್ಯಾಯಾಲಯಕ್ಕೆ ಸಂಬಂಧಿಸಿದ ಸೌಲಭ್ಯಗಳು ಮತ್ತು ವಕೀಲರ ಭವನ ನಿರ್ಮಾಣಕ್ಕೆ ಶೀಘ್ರದಲ್ಲಿ ಅಡಿಗಲ್ಲು ಹಾಕಿ ಕಟ್ಟಡ ಪ್ರಾರಂಭಿಸಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಸುವಂತೆ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ನ್ಯಾಯಮೂರ್ತಿ ಪಿ.ಸುಧಾ ಅವರು, ಯಬುರ್ಗಾದಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪಿಸಲು ಎಲ್ಲ ಅರ್ಹತೆ ಪಡೆದುಕೊಂಡಿದ್ದು , ಮುಂದಿನ ದಿನದಲ್ಲಿ ತಮ್ಮ ಎಲ್ಲ ಬೇಡಿಕೆಗಳನ್ನು ಪರಿಹರಿಸಲು ಕ್ರಮವಹಿಸಲಾಗುವುದು ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ. ಸಿ, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ., ಪ್ರಧಾನ ಸಿವಿಲ್ ನ್ಯಾಯಧೀಶ ಸಂಜೀವಕುಮಾರ ಪಾಚ್ಚಪುರೆ, ಯಲಬುರ್ಗಾ ಹಿರಿಯ ವಕೀಲರಾದ ಬಿ.ಎಂ. ಶಿರೂರ, ವ್ಹಿ.ಸ್.ಮೆಣಸಿಗೇರಿ,

ಅಪರ ಸರ್ಕಾರಿ ವಕೀಲ ಎಂ.ಎಸ್. ಪಾಟೀಲ್, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಿಸಿಮರದ, ತಾಲೂಕ ಸಂಘದ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಇ.ಟಿ ಪ್ರಮುಖರಾದ ಎಸ್.ಎನ್. ಶ್ಯಾಗೋಟಿ, ಪಿ.ಎಸ್. ಬೇಲೇರಿ, ಸಿ.ಪಿ.ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net