ಸಿಆರ್‌ಪಿಎಫ್ ಯೋಧಗೆ ಅಂತಿಮ ನಮನ

Kukanour CRPF soldier die
ಯಲಬುರ್ಗಾದಲ್ಲಿ ಮೃತ ಯೋಧ ಬಸವರಾಜ ಗಂಗಾವತಿ ಅವರಿಗೆ ಸಚಿವ ಮಧು ಬಂಗಾರಪ್ಪ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಸಂಸದ ರಾಜಶೇಖರ ಹಿಟ್ನಾಳ ಅಂತಿಮ ನಮನ ಸಲ್ಲಿಸಿದರು.
Published on

ಯಲಬುರ್ಗಾ: ಪಟ್ಟಣದಲ್ಲಿ ಭಾರತೀಯ ಸೇನೆ ಸಿಆರ್‌ಪಿಎಫ್ ಯೋಧ ಬಸವರಾಜ್ ಲೋಕಪ್ಪ ಗಂಗಾವತಿ (42) ಅವರಿಗೆ ಭಾನುವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಶನಿವಾರ ಬಸವರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಸೋಮವಾರ ಬೆಳಗ್ಗೆ ಅವರ ಮೃತದೇಹದ ಯಲಬುರ್ಗಾಕ್ಕೆ ತರಲಾಯಿತು. ಯೋಧನ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಮಹಾರಾಷ್ಟ್ರದ ನಾಗಪೂರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಕಳೆದ 22 ವರ್ಷದಿಂದ ವಿವಿಧ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಸಂಸದ ರಾಜಶೇಖರ್ ಹಿಟ್ನಾಳ, ಪಟ್ಟಣದ ಶ್ರೀಧರ ಮುರಡಿ ಹಿರೇಮಠದ, ಬಸವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ, ಒಪ್ಪತ್ತೇಶ್ವರ ಸ್ವಾಮೀಜಿ ಗುಳೇದಗುಡ್ಡ ಸೇರಿದಂತೆ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.

ದೇಶ ಸೇವೆಗಾಗಿ ಪತಿ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು. ಆದರೆ ಮಹಾರಾಷ್ಟ್ರದ ಸೇನಾ ಅಧಿಕಾರಿಗಳು ಹಾಗೂ ಸರ್ಕಾರ ಅನಾರೋಗ್ಯದಿಂದ ಅವರಿಗೆ ಚಿಕಿತ್ಸೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. | ಯೋಧನ ಪತ್ನಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net