ಹೆಣ್ಣು ಮಕ್ಕಳು ಆರೋಗ್ಯದ ಕಾಳಜಿ ವಹಿಸಲಿ

Untitled design(2)
Published on

ಯಲಬುರ್ಗಾ: ಹದಿಹರೆಯದ ಹೆಣ್ಣು ಮಕ್ಕಳು ವಿದ್ಯಾಭ್ಯಾಸದ ಜತೆಗೆ ಸ್ವಚ್ಛತೆ ಮತ್ತು ಆರೋಗ್ಯದ ಕಡೆಗೆ ಗಮನ ಹರಿಸಲಿ ಎಂದು ಡಾ.ಜಯಣ್ಣ ಕುರಿ ಹೇಳಿದರು.

ತಾಲೂಕಿನ ಹೊಸಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಬುಧವಾರ ರಾಷ್ಟ್ರೀಯ ಬಾಲ ಸ್ವಾಸ್ಥೃ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಕಿಶೋರ್ ಸ್ವಾಸ್ಥೃ ಕಾರ್ಯಕ್ರಮದಡಿಯಲ್ಲಿ ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡದಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆಗೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಲ್ಲಿ ರಕ್ತಹೀನತೆ ಹಾಗೂ ಅನಿಮಿಯಾ ಮುಕ್ತ ಕರ್ನಾಟಕ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಹಾಗಾಗಿ ರಾಜ್ಯಾದ್ಯಂತ ತಪಾಸಣೆ ಮಾಡಲಾಗುತ್ತಿದೆ ಎಂದರು. ಡಾ.ಶಿವಾನಂದಗೌಡ, ನರ್ಸಿಂಗ್ ಅಧಿಕಾರಿ ಕನಕಮ್ಮ, ಆಪ್ತ ಸಮಾಲೋಚಕ ಶರಣಪ್ಪ ಉಪ್ಪಾರ, ಪ್ರಾಚಾರ್ಯ ವಿರೂಪಾಕ್ಷಪ್ಪ ಹನಮಶೆಟ್ಟಿ, ಮಲ್ಲಿಕಾರ್ಜುನ್ ಅಂಗಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net