ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ

Untitled design (7)
Published on

ಯಲಬುರ್ಗಾ: ರಾಜ್ಯದಲ್ಲಿ ಬಡವರ ಹಿಂದುಳಿದ ಹಾಗೂ ದಲಿತರಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಬಂಡಿಹಾಳ ಗ್ರಾಮಕ್ಕೆ ಮಂಜೂರಾಗಿರುವ ಆರೋಗ್ಯ ಕೇಂದ್ರದ ಜಾಗ ಪರಿಶೀಲಿಸಿ ಮಾತನಾಡಿದರು. ತಾಲೂಕಿಗೆ ಮೂರು ಗ್ರಾಮಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮುಂಜೂರಾಗಿವೆ. ಅವುಗಳಿಗೆ ಈಗಾಗಲೇ ಗುರುತಿಸಲಾಗಿದೆ. ಆದಷ್ಟು ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು. ರಾಜ್ಯದಲ್ಲಿ ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ ಎಂದರು.

ಡಿಎಚ್‌ಒ ಡಾ.ಲಿಂಗರಾಜು, ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಲೂಕು ಆರೋಗ್ಯ ಅಧಿಕಾರಿ ಅಮರೇಶ ನಾಗರಾಳ, ಪಿಡಬ್ಲುೃಡಿ ಎಇಇ ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಶರಣಪ್ಪ ಗಾಂಜಿ, ಶಿವನಗೌಡ ದಾನರಡ್ಡಿ, ರಾಜು ನಿಡಗುಂದಿ, ಶರಣಪ್ಪ ನಾಗರಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net