ಸಮಾಜ ತಿದ್ದುವ ಶಕ್ತಿ ಪತ್ರಿಕೋದ್ಯಮಕ್ಕಿದೆ

ylb-1
ಯಲಬುರ್ಗಾ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನ ಕಾರ್ಯಕ್ರಮವನ್ನು ಕೊಪ್ಪಳ ವಿವಿ ಕುಪಪತಿ ಪ್ರೊ.ಬಿ.ಕೆ.ರವಿ ಉದ್ಘಾಟಿಸಿದರು. ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ ಬಿರಾದಾರ, ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಮುಖ್ಯಾಧಿಕಾರಿ ನಾಗೇಶ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹಳ್ಳಿಕೇರಿ ಇತರರಿದ್ದರು.
Published on

ಯಲಬುರ್ಗಾ: ಸಮಾಜಕ್ಕೆ ಪತ್ರಿಕೋದ್ಯಮ ಕೊಡುಗೆ ಅಪಾರವಿದ್ದು, ಕನ್ನಡ ಪತ್ರಿಕೋದ್ಯಮ ಮತ್ತಷ್ಟು ಬೆಳೆಯಬೇಕು ಎಂದು ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ ಹೇಳಿದರು.

ಪಟ್ಟಣದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಸೋಮವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ ಹಾಗೂ ಪತ್ರರ್ಕರಿಗೆ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುದ್ರಣ ಹಾಗೂ ದೃಶ್ಯ ಮಾಧ್ಯಮಕ್ಕೆ ಸಮಾಜ ತಿದ್ದುವ ಶಕ್ತಿಯಿದೆ. ಸ್ಥಳೀಯ ಮಾಧ್ಯಮಗಳು ಹಲವು ಸಂಕಷ್ಟ ಎದುರಿಸುತ್ತಿದ್ದು, ಅನೇಕ ಪತ್ರಕರ್ತರು ಆರ್ಥಿಕ ತೊಂದರೆಯಲ್ಲಿದ್ದಾರೆ. ಸರ್ಕಾರ ಇತ್ತೀಚೆಗೆ ಅವರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಮಾತನಾಡಿ, ಸಮಾಜದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೋದ್ಯಮ ಉತ್ತಮ ಕೆಲಸ ಮಾಡುತ್ತಿದೆ. ಪತ್ರಿಕೆಗಳ ವರದಿಗಳು ಅನೇಕ ಸಮಸ್ಯೆ ನಿವಾರಿಸಲು ನಮಗೆ ಅನುಕೂಲವಾಗಿವೆ ಎಂದರು.

ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ತಾಪಂ ಇಒ ಸಂತೋಷ ಪಾಟೀಲ ಬಿರಾದಾರ, ಪಪಂ ಮುಖ್ಯಾಧಿಕಾರಿ ನಾಗೇಶ, ಕಾನಿಪ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹಳ್ಳಿಕೇರಿ, ರಾಜ್ಯ ಸಮಿತಿ ಸದಸ್ಯ ಎಚ್.ಎಸ್.ಹರೀಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ ವೈ., ಪಿಜಿ ಸೆಂಟರ್ ಆಡಳಿತಾಧಿಕಾರಿ ಕೆ.ಎಚ್.ಛತ್ರದ್, ತಾಪಂ ಮಾಜಿ ಅಧ್ಯಕ್ಷ ವೀರನಗೌಡ ಪಾಟೀಲ, ಮಾಜಿ ಸೈನಿಕ ಮಂಜುನಾಥ ಬಡಿಗೇರ, ಕಾನಿಪ ತಾಲೂಕು ಅಧ್ಯಕ್ಷ ಶಿವಮೂರ್ತಿ ಇಟಗಿ, ಅಧಿಕಾರಿಗಳು ವಿದ್ಯಾರ್ಥಿಗಳು, ಪತ್ರಕರ್ತರು, ವಿತರಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net