

ಯಲಬುರ್ಗಾ: ಶಾಲಾ-ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಒತ್ತಾಯಿಸಿ ತಾಲೂಕಿನ ಚಿಕ್ಕೊಪ್ಪ ತಾಂಡಾದ ವಿದ್ಯಾರ್ಥಿಗಳು ಶುಕ್ರವಾರ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ತಾಲೂಕು ಕೇಂದ್ರಕ್ಕೆ ನಿತ್ಯ ಶಾಲಾ ಕಾಲೇಜಿಗೆ ನೂರಾರು ವಿದ್ಯಾರ್ಥಿಗಳು ತೆರಳುತ್ತಿದ್ದು, ಸರಿಯಾದ ಸಮಯಕ್ಕೆ ಬಸ್ ಬಿಡುತ್ತಿಲ್ಲ. ಇದರಿಂದ ಸಕಾಲಕ್ಕೆ ತರಗತಿಗೆ ಹಾಜರಾಗಲು ಸಮಸ್ಯೆಯಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.