ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ವೇದಿಕೆ

Taluk level art festival
ಯಲಬುರ್ಗಾದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ ಕಾರ್ಯಕ್ರಮವನ್ನು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಉದ್ಘಾಟಿಸಿದರು. ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ತಾಪಂ ಇಒ ಸಂತೋಷ್ ಪಾಟೀಲ್, ಬಿಇಒ ಸೋಮಶೇಖರಗೌಡ ಪಾಟೀಲ್, ಎಸ್.ವಿ.ಧರಣಾ ಇತರರಿದ್ದರು.
Published on

ಯಲಬುರ್ಗಾ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.

ಪಟ್ಟಣದ ಹೇಮಾದ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಗುರುವಾರ ಆಯೋಜಿಸಿದ್ದ ಅವಳಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಪ್ರತಿಭಾ ಕಾರಂಜಿ-ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲೋತ್ಸವದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿರುತ್ತಾರೆ. ಪಠ್ಯೇತರ ಚಟುವಟಿಕೆಗಳು ಅಧ್ಯಯನಕ್ಕೆ ಪೂರಕವಾಗಿರಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ ಎಂಬುದನ್ನು ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಮನದಟ್ಟು ಮಾಡಬೇಕು. ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದ್ದು, ಕಲೆ ಹೊರಹೊಮ್ಮಲು ಸಹಕಾರಿಯಾಗಿದೆ ಎಂದರು.

ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ಸದಸ್ಯ ಅಮರೇಶ ಹುಬ್ಬಳ್ಳಿ, ತಾಪಂ ಇಒ ಸಂತೋಷ್ ಪಾಟೀಲ್, ಬಿಇಒ ಸೋಮಶೇಖರಗೌಡ ಪಾಟೀಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಎಸ್.ವಿ.ಧರಣಾ, ಮಾರುತೇಶ ತಳವಾರ್, ಬಿಆರ್‌ಸಿ ಸಮನ್ವಯಾಧಿಕಾರಿ ಅಶೋಕ ಗೌಡರ, ಸಂಸ್ಥೆಯ ಅಧ್ಯಕ್ಷ ರಂಗನಾಥ ವಲ್ಮಕೊಂಡಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಜೆ.ದಾನಿ, ದೈಹಿಕ ಶಿಕ್ಷಣ ಪರಿವೀಕ್ಷಕ ವೀರಭದ್ರಪ್ಪ ಅಂಗಡಿ, ಕನಕಪ್ಪ ಕಂಬಳಿ, ಬಸವರಾಜ ಮಾಸ್ತಿ, ಶಿವಪ್ಪ ವಾದಿ, ಬಸವರಾಜ ಮೇಟಿ, ಸಂಗಪ್ಪ ರಾಜೂರ, ಅಶೋಕ ಮಾಲಿಪಾಟೀಲ್, ಮಹೇಶ ಸಬರದ, ಬಸವರಾಜ ಅಂಗಡಿ, ದೀಪಾ ಹೊಸಳ್ಳಿ, ಬಸವರಾಜ ವಲ್ಮಕೊಂಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net