ಯಲಹಂಕ ಸಾರ್ವಜನಿಕ ಆಸ್ಪತ್ರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ynk hospital
Published on

ಬೆಂಗಳೂರು: ಯಲಹಂಕದ ಸಾರ್ವಜನಿಕ ಆಸ್ಪತ್ರೆ ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಮೌಲ್ಯಮಾಪನದಲ್ಲಿ ಅತ್ಯುತ್ತಮ ಅಂಕ ಗಳಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

ಪ್ರತಿ ವರ್ಷ ಅತ್ಯುತ್ತಮ ಗುಣಮಟ್ಟ ಕಾಯ್ದುಕೊಳ್ಳುವ ಸಾರ್ವಜನಿಕ ಆಸ್ಪತ್ರೆಗಳ ಮೌಲ್ಯಮಾಪನ ನಡೆಸಲಾಗುತ್ತದೆ. ಸುಸಜ್ಜಿತ ಉಪಕರಣಗಳಿಂದ ನಾಗರಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡುವ ಮೂಲಕ ಯಲಹಂಕದ ಆಸ್ಪತ್ರೆಯು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಮೌಲ್ಯಮಾಪನದಲ್ಲಿ ಶೇ.94 ಅಂಕ ಗಳಿಸಿದೆ.

ಶಾಸಕರಿಂದ ಅಭಿನಂದನೆ:

ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಯಲಹಂಕದ ಸಾರ್ವಜನಿಕ ಆಸ್ಪತ್ರೆಯ ಸಾಧನೆ ಸಂತಸ ತಂದಿದೆ. ಈ ಸಾಧನೆಯಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿಗಳು, ಸಿಬ್ಬಂದಿ ಪಾತ್ರ ಹಿರಿದಾಗಿದ್ದು, ರಾಷ್ಟ್ರ ಮಟ್ಟದಲ್ಲಿಯೂ ಇನ್ನೂ ಹೆಚ್ಚಿನ ಅಂಕ ಗಳಿಸಿ ರಾಜ್ಯಕ್ಕೆ ಹೆಸರು ತರಲಿ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net