

ಯಲ್ಲಾಪುರ: ಪಟ್ಟಣದ ಪ್ರಸಿದ್ಧ ಕಾಳಮ್ಮನಗರ ಕಾಳಮ್ಮದೇವಿ ದೇವಸ್ಥಾನದ ವರ್ಧಂತಿ ಉತ್ಸವ ಫೆ. 17 ಹಾಗೂ 18ರಂದು ವಿವಿಧ ಧಾರ್ವಿುಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಸಂಜೀವಕುಮಾರ ಹೊಸ್ಕೇರಿ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಫೆ. 17ರಂದು ಚಂಡಿಕಾಪಾಠ, ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಫೆ. 18ರಂದು ನವಚಂಡಿಕಾ ಹವನ, ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ 8ಕ್ಕೆ ಪ್ರಸಿದ್ಧ ಕಲಾವಿದರಿಂದ ಕವಿರತ್ನ ಕಾಳಿದಾಸ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.
ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾದ ಸೂರಜ್ ಶೆಟ್ಟಿ, ನಾಗೇಶ ಬೋವಿವಡ್ಡರ, ಇತರರಿದ್ದರು.