ರಾಜ್ಯದಲ್ಲಿ ಹಿಂಗಾರು ಅಬ್ಬರ: ನಾಳೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​​

Rains
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಹಿಂಗಾರು, ಮುಂದಿನ ಐದಾರು ದಿನ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ಚಿಕ್ಕಮಗಳೂರಿನ ಮೂಡಗೆರೆ, ಚಾಮರಾಜನಗರದ ಹರದನಹಳ್ಳಿ,ಹಾವೇರಿಯ ಹನುಮಾನಮಟ್ಟಿ, ಮೈಸೂರಿನ ಹುಣಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳಗ್ಗೆಯಿಂದಲೇ ಗುಡುಗು ಮಿಂಚು ಸಹಿತ ಮಳೆ ಸುರಿಯಿತು. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಅ.13ರಂದು, ಅ.15ರಿಂದ ಅ.17ರವರೆಗೆ ಜೋರಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್​, ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬೆಂಗಳೂರು, ಬೆಂ. ಗ್ರಾಮಾಂತರ, ವಿಜಯನಗರ, ಚಿತ್ರದುರ್ಗದಲ್ಲಿ ಮುಂದಿನ ಮೂರ್ನಾಲ್ಕು ದಿನ ಗುಡುಗು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ.

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ತೀವ್ರ ಕುಸಿತವಾಗಿರುವ ಪರಿಣಾಮ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಅ.18ರವರೆಗೆ ಜೋರು ಮಳೆಯಾಗಲಿದೆ. ಅ.1ರಿಂದ ಆರಂಭವಾದ ಹಿಂಗಾರು ಆಶಾದಾಯಕವಾಗಿದ್ದು, ಮಲೆನಾಡು, ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುತ್ತಿದೆ.

| ಸಿ.ಎಸ್​.ಪಾಟೀಲ್​. ಹವಾಮಾನ ಇಲಾಖೆ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net