ನಾಳೆ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

raining in koppal city and villages
ಕೊಪ್ಪಳದಲ್ಲಿ ಸೋಮವಾರ ಸುರಿದ ಮಳೆಯಲ್ಲಿ ತಪ್ಪಿಸಿಕೊಳ್ಳಲು ಮಹಿಳೆಯರು ಓಡಿದ ದೃಶ್ಯ.
Published on

ಬೆಂಗಳೂರು:ಉತ್ತರ ಭಾರತದಲ್ಲಿ ಮುಂಗಾರು ಪ್ರಬಲವಾಗಿರುವ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ತುಸು ಇಳಿಮುಖವಾಗುತ್ತಿದೆ. ಜತೆಗೆ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಮುರ್ನಾಲ್ಕು ದಿನ ಮುಂದುವರಿಯುವ ಸಾಧ್ಯತೆ ಇದೆ.

ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಬೀದರ್​ ಬಾಗಲಕೋಟೆಯಲ್ಲಿ ಆ.17ರಿಂದ ಮುಂದಿನ ಎರಡು ದಿನ ಬಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ದಕ್ಷಿಣ ಕನ್ನಡ,ಉಡುಪಿ, ಚಿತ್ರದುರ್ಗದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್​ ಇರಲಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಮುಂದಿನ 3 ದಿನ ಗುಡುಗು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಪ್ರಸ್ತುತ ಹವಾಮಾನ ಸ್ಥಿತಿ ಗಮನಿಸಿದರೆ ಆ.20ರಿಂದ ದಕ್ಷಿಣ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣವಾಗಲಿದೆ.

ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಕರಾವಳಿಯಲ್ಲಿ ಆ.18ರಿಂದ ಆ.19ರವರೆಗೆ ಮಳೆ ಇರುವುದಿಲ್ಲ. ಆ.20ರಿಂದ ಮುಂದಿನ 2 ದಿನ ಬಿರುಸಾಗಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಮಾತ್ರ ಇದ್ದರೆ, ಉಳಿದೆಡೆ ಸಾಧಾರಣವಾಗಿ ಸುರಿಯಲಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net