7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಕರ್ನಾಟಕದಲ್ಲಿ ಮುಂದುವರಿದ ಮಳೆ

Heavy rain lashed Vijayapura city for more than an hour on Wednesday evening.
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶನಿವಾರವೂ ಗುಡುಗು ಸಹಿತ ವರುಣಾರ್ಭಟ ಮುಂದುವರಿದಿದೆ.

ಮಳೆ ಕೊರತೆ ಅನುಭವಿಸುತ್ತಿದ್ದ ಹಳೆಯ ಮೈಸೂರು ಭಾಗದ ಪ್ರದೇಶಗಳಲ್ಲಿ ಅ.4ರಿಂದ ಅ.10 ರವರೆಗೆ ವಾಡಿಕೆಗಿಂತ ಅಧಿಕವಾಗಿ ಸುರಿದಿದೆ. ಬೆಂಗಳೂರು ನಗರ, ಬೆಂ.ದಕ್ಷಿಣ, ಮಂಡ್ಯ, ಕೋಲಾರ, ತುಮಕೂರು ಮತ್ತು ದಾವಣಗೆರೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಗಮನಾರ್ಹ.

ಮೈಸೂರು, ಕೊಡಗು, ಚಾಮರಾಜನಗರದಲ್ಲಿ ಮುಂದಿನ 2 ದಿನ ಮತ್ತು ಬೆಂ.ದಕ್ಷಿಣ, ಮಂಡ್ಯ, ಹಾಸನ, ದಕ್ಷಿಣ ಕನ್ನಡದಲ್ಲಿ ಅ.12ರಂದು ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ,ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಸೇರಿ ಉತ್ತರ ಕರ್ನಾಟಕದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕರ್ನಾಟಕ, ಕರಾವಳಿ ಭಾಗದಲ್ಲಿ ಈಗಾಗಲೇ ಮಳೆ ಕ್ಷೀಣವಾಗಿ ಒಣಹವೆ ಮುಂದುವರಿದಿದೆ. ರಾಜ್ಯದ ಕೆಲ ಭಾಗಗಳಲ್ಲಿ ಬೆಳಗ್ಗಿನ ಜಾವ ಹಿಮ ಅಥವಾ ಮಂಜು ಬೀಳುತ್ತಿದೆ. ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 3 ದಿನ ಮಳೆಯಾಗಲಿದ್ದು, ಅ.15ರಿಂದ ಇಳಿಮುಖವಾಗಲಿದೆ.

- ಸಿ.ಎಸ್.ಪಾಟೀಲ್, ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net