ಇಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

male ssss
Published on

ಮಂಗಳೂರು: ಕರಾವಳಿಯಲ್ಲಿ ಶುಕ್ರವಾರ ಅಲ್ಲಲ್ಲಿ ಹನಿ ಮಳೆಯಾಗಿದೆ. ಇದನ್ನು ಹೊರತುಪಡಿಸಿದರೆ ಇಡೀ ದಿನ ಮೋಡ, ಬಿಸಿಲು ವಾತಾವರಣ ಕಂಡುಬಂದಿದೆ. ಮಳೆಯ ಪ್ರಮಾಣ ಇಳಿಮುಖಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಆ.17ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಮೋಡ ಹೊರತುಪಡಿಸಿದರೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ಬೆಳಗ್ಗೆ ಮೋಡ ಇದ್ದರೂ ಮಳೆ ಬಂದಿಲ್ಲ. ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ಹನಿ ಮಳೆಯಾಗಿದೆ. ರಾತ್ರಿ ವೇಳೆ ಪಂಜ ಸುತ್ತಮುತ್ತ ಭಾರಿ ಮಳೆ ಸುರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net