

ಬೆಂಗಳೂರು : ಮುಂಗಾರು ಮುಗಿಯಲು 5 ದಿನ ಬಾಕಿ ಇರುವಾಗಲೇ ರಾಜ್ಯದಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗಲಿದೆ.
ಮೂರ‌್ನಾಲ್ಕು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 2 ದಿನ ಹಾಗೂ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಮಳೆಯಾಗುವ ನಿರೀಕ್ಷೆ ಇದೆ.