ಗುರುಪುರ ಸರ್ಕಾರಿ ಶಾಲೆಯಲ್ಲಿ ಯೋಗ

New Project (32)
Published on

ಗುರುಪುರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಯುಷ್ ಇಲಾಖೆ, ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯ, ಆಯುಷ್ಮಾನ್ ಆರೋಗ್ಯ ಮಂದಿರ ಸಹಯೋಗದಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ಗುರುಪುರ ಪಿಡಿಒ ಪಂಕಜಾ ಶೆಟ್ಟಿ, ಸದಸ್ಯೆ ಚಂದ್ರಾವತಿ, ಕಾಲೇಜು ಪ್ರಾಂಶುಪಾಲೆ ಕಿಶೋರಿ, ಪ್ರಾಥಮಿಕ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಭಟ್, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಝೀನತ್, ಹೋಮಿಯೋಪತಿ ಚಿಕಿತ್ಸಾಲಯದ ಆಯುಷ್ ಆರೋಗ್ಯ ವೈದ್ಯಾಧಿಕಾರಿ ಡಾ.ಶ್ರೀದೇವಿ, ಪ್ರೌಢಶಾಲಾ ಮುಖ್ಯಶಿಕ್ಷಕಿ ವೀಣಾ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು.

ಆಯುಷ್ ಇಲಾಖೆಯ ಸರಳ ಯೋಗಗಳು ಪುಸ್ತಕ ಅನಾವರಣಗೊಳಿಸಲಾಯಿತು. ಆಳ್ವಾಸ್ ಆಯುರ್ವೇದ ವೈದ್ಯ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಯೋಗ ಮತ್ತು ಪ್ರಾಣಾಯಾಮ ತರಬೇತಿ ನೀಡಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ವೀಣಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಜಯಲಕ್ಷ್ಮೀ ನಿರೂಪಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ಗ್ರೆಟ್ಟಾ ಮರಿಯಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net