

ಗಂಗೊಳ್ಳಿ: ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಪ್ರೌಢಶಾಲಾ ಯೋಗ ಸ್ಪರ್ಧೆ ಇತ್ತೀಚೆಗೆ ನಡೆಯಿತು.
ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವಿಎಂಕೆ ಸಂಸ್ಥೆಯ ಬಿ.ಎನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನರೇಂದ್ರ ಕಾಮತ್ ಯೋಗದ ಕುರಿತು ಮಾಹಿತಿ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ ಮೆಟ್ಟಿನಹೊಳೆ ಸ್ಪರ್ಧೆಯ ನಿಯಮಗಳನ್ನು ವಿವರಿಸಿದರು. ಬೈಂದೂರು ವಲಯದ ಟಿಪಿಒ ಅರುಣ್‌ಕುಮಾರ್ ಶೆಟ್ಟಿ, ನಾಲ್ಕು ವಲಯದ ಟಿಪಿಒ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲೆ ದೀಪಿಕಾ ಸುಭಾಸ್ ಸ್ವಾಗತಿಸಿದರು. ಚಂದ್ರಶೇಖರ ಶೆಟ್ಟಿ ಪ್ರಸ್ತಾವನೆಗೈದರು. ವಿಶ್ವನಾಥ ವಂದಿಸಿದರು. ಜಯಲಕ್ಷ್ಮೀ ನಿರೂಪಿಸಿದರು.