

ಕುಂದಾಪುರ: ನಿವೃತ್ತ ಸರ್ಕಾರಿ ನೌಕರರ ಸಂಘ ಕುಂದಾಪುರ, ಕುಂದಾಪುರ ಹಿರಿಯ ನಾಗರಿಕರ ವೇದಿಕೆ ಜಂಟಿಯಾಗಿ 11ನೇ ವಿಶ್ವ ಯೋಗ ದಿನವನ್ನು ಕುಂದಾಪುರದ ಕುಂದೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಆಚರಿಸಲಾಯಿತು.
ಕುಂದೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ಯಡಿಯಾಳ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ಸದಸ್ಯ, ಯೋಗಪಟು ಎಂ.ಜಿ.ಮಲ್ಲಪ್ಪ ಯೋಗಾಸನದ ಬಗ್ಗೆ ಮಾಹಿತಿ ನೀಡಿದರು. ನಿವೃತ್ತ ಶಿಕ್ಷಕ ಶ್ರೀನಿವಾಸ ಶೆಟ್ಟಿ ಮಾರ್ಕೋಡು ಸಹಕರಿಸಿದರು. ಎಂ.ಜಿ.ಮಲ್ಲಪ್ಪ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಸಿ.ಎಚ್.ಜಗನ್ನಾಥ ಶೆಟ್ಟಿ, ಗೌರವಾಧ್ಯಕ್ಷ ಬಿ.ಭೋಜರಾಜ ಶೆಟ್ಟಿ, ಗೌರವ ಸಲಹೆಗಾರ ರಾಮದಾಸ್ ನಾಯಕ್, ನಿವೃತ್ತ ನೌಕರರ ಸಂಘ ಅಧ್ಯಕ್ಷ ವಸಂತ ಹೆಗ್ಡೆ, ಖಜಾಂಚಿ ಎಚ್.ಸುಬ್ರಾಯ ಗಾಣಿಗ, ಕೆ.ಕೃಷ್ಣಯ್ಯ ಆಚಾರ್ಯ ಉಪಸ್ಥಿತರಿದ್ದರು. ಸದಸ್ಯೆ ಸಾವಿತ್ರಿ ಕೆ.ಹೆಗಡೆ ಪ್ರಾರ್ಥನೆ ಹಾಡಿದರು. ಕಾರ್ಯದರ್ಶಿ ರಘುವೀರ ಕೆ. ನಿರೂಪಿಸಿದರು.