

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಯೋಗದಿಂದ ಉತ್ತಮ ಆರೋಗ್ಯ ಹೊಂದಬಹುದು. ಜ್ಞಾಪಕ ಶಕ್ತಿ ವೃದ್ಧಿಯಾಗುವುದರ ಜತೆಗೆ ಏಕಾಗ್ರತೆಯನ್ನು ಸಾಧಿಸಬಹುದು ಎಂದು ಶ್ರೀ ದತ್ತ ಯೋಗ ಕೇಂದ್ರ ಹುಬ್ಬಳ್ಳಿ ಶಾಖೆಯ ಯೋಗ ತರಬೇತುದಾರ ಅನಿಲಕುಮಾರ ಅನವಟ್ಟಿ ಹೇಳಿದರು.
ಹುಬ್ಬಳ್ಳಿಯ ಎನ್ಎಲ್ಇ ಸೊಸೈಟಿಯ ಡಾ. ಆರ್.ಬಿ.ಪಾಟೀಲ ಮಹೇಶ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು.
ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಚಾರ್ಯ ರಮೇಶ ಹೊಂಬಾಳೆ ಇದ್ದರು. ಇಂಗ್ಲಿಷ್ ಉಪನ್ಯಾಸಕ ನೀಲ್ ಪ್ರತಾಪನ್ ನಿರೂಪಿಸಿದರು. ಕನ್ನಡ ಉಪನ್ಯಾಸಕ ದ್ಯಾಮಣ್ಣ ಚೌಡಾಳ ವಂದಿಸಿದರು.
ಐಇಎಂಎಸ್ ಎಂಬಿಎ ಕಾಲೇಜ್
ಹುಬ್ಬಳ್ಳಿ ತಾರಿಹಾಳದ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಇನ್ ಮ್ಯಾನೇಜ್ವೆುಂಟ್ ಸೈನ್ಸ್ (ಐಇಎಂಎಸ್) ಎಂಬಿಎ ಕಾಲೇಜಿನಲ್ಲಿ ಲಿಂಗರಾಜನಗರ ಯೋಗ ಕೇಂದ್ರ ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಯೋಗ ಗುರು ಡಾ. ಈಶ್ವರ ಎಂ.ಮತ್ತು ಪ್ರೀತಿ ಹಾಗೂ ರೂಪಾ ಕಟಿಗಾರ ಯೋಗಾಸನಗಳನ್ನು ಪ್ರದರ್ಶಿಸಿದರು. ಸಂಸ್ಥೆಯ ನಿರ್ದೇಶಕ ಡಾ. ವೀರಣ್ಣ ಡಿ.ಕೆ. ಮಾತನಾಡಿದರು. ಗ್ರೇಟರ್ ಹುಬ್ಬಳ್ಳಿ ಧಾರವಾಡ ಕೈಗಾರಿಕಾ ಸಂಘದ ಅಧ್ಯಕ್ಷ ವಿಜಯ ಭಾರತಿ ಉಪಸ್ಥಿತರಿದ್ದರು. ಮಂಜುನಾಥ ಮನಗುಂಡಿ ನಿರ್ವಹಿಸಿದರು.