ಶ್ರೀ ಸುತ್ತೂರು ಮಠದಲ್ಲಿ ಯೋಗ ದಿನಾಚರಣೆ

Yoga Day celebration at Sri Sattur Mutt
Published on

ಮೈಸೂರು: ಸದೃಢ ಮನಸ್ಸು ಮತ್ತು ಉತ್ತಮ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯವೂ ಅಭ್ಯಾಸ ಮಾಡಬೇಕು ಎಂದು ನಿವೃತ್ತ ಮುಖ್ಯೋಪಾಧ್ಯಯ ಎಸ್.ನಾಗೇಂದ್ರ ಪ್ರಭು ಹೇಳಿದರು.

ನಗರದ ಚಾಮುಂಡಿಬೆಟ್ಟದ ತಪ್ಪಲಿನ ಶ್ರೀ ಸುತ್ತೂರು ಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಯೋಗ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಅಂತಾರಾಷ್ಟ್ರೀಯ ಯೋಗದಿನ ಆಚರಣೆ ಪ್ರಾರಂಭವಾಗಿ ಇಂದಿಗೆ ಹತ್ತು ವರ್ಷಗಳು ತುಂಬಿವೆ. ವಿಶ್ವಕ್ಕೆ ಭಾರತ ನೀಡಿದ ಮಹತ್ವದ ಕೊಡುಗೆಗಳಲ್ಲಿ ಯೋಗವೂ ಒಂದು ಎಂದು ಹೇಳಿದರು.

ಮೈಸೂರಿನ ಬಿ.ಕೆ.ಎಸ್. ಅಯ್ಯಂಗಾರ್ ಮತ್ತು ಪಟ್ಟಾಭಿ ಜೋಯಿಸ್ ಸೇರಿದಂತೆ ಅನೇಕರು ಯೋಗದ ಮಹತ್ವ ಜಗತ್ತಿನೆಲ್ಲೆಡೆ ಪಸರಿಸಲು ಪ್ರಮುಖ ಪಾತ್ರ ವಹಿಸಿದರು. ಯೋಗದ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಜಗತ್ತಿಗೆ ಸಾರಲಾಗುತ್ತಿದೆ. ಇದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು. ದಿನನಿತ್ಯವೂ ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು. ಸುತ್ತೂರು ಶ್ರೀಮಠದಲ್ಲಿ ನಿತ್ಯವೂ ಯೋಗಾಭ್ಯಾಸ ನಡೆಯುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net