

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹಾಗೂ ಧನ್ಯೋಸ್ಮಿ ಯೋಗ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜೂನ್ 21 ರಂದು ಬೆಳಗ್ಗೆ 6.15ಕ್ಕೆ ದೇಶಪಾಂಡೆ ನಗರದ ಕರ್ನಾಟಕ ಜಿಮ್ಖಾನ ಮೈದಾನದಲ್ಲಿ ವಿಶ್ವ ಯೋಗ ದಿನ ಆಚರಿಸಲಾಗುವುದು.
ಶಾಸಕ ಮಹೇಶ ಟೆಂಗಿನಕಾಯಿ, ನರರೋಗ ತಜ್ಞ ಡಾ. ಅನಿರುದ್ದ ಕುಲಕರ್ಣಿ, ಕ್ಷಮತಾ ಸಂಚಾಲಕ ಗೋವಿಂದ ಜೋಶಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಧನ್ಯೋಸ್ಮಿ ಯೋಗ ಕೇಂದ್ರದ ಯೋಗಗುರು ವಿನಾಯಕ ತಲಗೇರಿ ಅವರು ಯೋಗ ಶಿಬಿರ ನಡೆಸಿಕೊಡುವರು. ಎಲ್ಲ ವಯೋಮಾನದ ಮಹಿಳೆಯರು ಹಾಗೂ ಪುರುಷರು ಭಾಗವಹಿಸಬಹುದು. ಯೋಗಾಸಕ್ತರು ಬೆಳಗ್ಗೆ 6 ಗಂಟೆಯೊಳಗೆ ಸಭಾಂಗಣದಲ್ಲಿ ಹಾಜರಿರಬೇಕು. ಯೋಗಮ್ಯಾಟ್ ಅಥವಾ ಚಿಕ್ಕ ಜಮಖಾನ ತರಬೇಕು ಎಂದು ಸಂಘಟಕರು ತಿಳಿಸಿದ್ದಾರೆ.