

ಹುಬ್ಬಳ್ಳಿ : ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಿಂದ ಶುಕ್ರವಾರದಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ರೈಲ್ವೆ ಅಧಿಕಾರಿಗಳ ಕ್ಲಬ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್ನ ನಿವೇದಿತಾ ಅವರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ಮಾಡಲಾಯಿತು.
ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ಹುಬ್ಬಳ್ಳಿ ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಸಂತೋಷ ಕುಮಾರ ವರ್ವ, ವರಿಷ್ಠ ವಿಭಾಗೀಯ ಸಿಬ್ಬಂದಿ ಅಧಿಕಾರಿ ಕೆ. ಆಸಿಫ್ ಹಫೀಜ್ ಹಾಗೂ ಇತರರು ಪಾಲ್ಗೊಂಡಿದ್ದರು.