

ಹುಬ್ಬಳ್ಳಿ : ಇಲ್ಲಿನ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಇನ್ಸ್ಟಿಟ್ಯೂಟ್ನಲ್ಲಿ ನೈಋತ್ಯ ರೈಲ್ವೆಯಿಂದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು.
ಯೋಗ ತರಬೇತುದಾರ ಮತ್ತು ರಾಜ್ಯ ಮಟ್ಟದ ಚಿನ್ನದ ಪದಕ ವಿಜೇತೆ ಉಷಾ ಮೋದ್ ಅವರು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಷಾ ಮೋದ್, ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಆಗುತ್ತದೆ ಎಂದರು.
ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಮತ್ತು ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ. ಎಸ್. ಜೈನ್, ವಿವಿಧ ಇಲಾಖೆಗಳ ಪ್ರಧಾನ ಮುಖ್ಯಸ್ಥರು, ಇತರ ಹಿರಿಯ ಅಧಿಕಾರಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ನೈಋತ್ಯ ರೈಲ್ವೆಯ ಬೆಂಗಳೂರು, ಹುಬ್ಬಳ್ಳಿ, ಮೈಸೂರು ವಿಭಾಗಗಳು ಮತ್ತು ಇತರ ಘಟಕಗಳಲ್ಲಿಯೂ ಅಂತಾರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.