ಮಡಿಕೇರಿಯಲ್ಲಿ ಜಿಲ್ಲಾಡಳಿತ ನೇತೃತ್ವದಲ್ಲಿ ಯೋಗ ದಿನಾಚರಣೆ

21mdk05
Published on

ಮಡಿಕೇರಿ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಅಂತರರಾಷ್ಟಿçÃಯ 9 ನೇ ಯೋಗ ದಿನ ಬುಧವಾರ ಇಲ್ಲಿನ ಗೌಡ ಸಮಾಜದಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಅಂತರ ರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು.

ವಸುದೈವ ಕುಟುಂಬಕ್ಕಾಗಿ ಯೋಗ ಈ ಹೆಸರಿನಲ್ಲಿ ನಡೆದ ಅಂತರರಾಷ್ಟಿçÃಯ 9 ನೇ ಯೋಗ ದಿನಾಚರಣೆಯಲ್ಲಿ ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿ.ಪಂ. ಸಿಇಒ ಡಾ. ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ನಂಜುAಡಯ್ಯ, ಯೋಗ ಶಿಕ್ಷಕÀ ಮಹೇಶ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕÀ ಸಿ.ರಂಗಧಾಮಯ್ಯ ಸೇರಿ ಹಲವರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಮಾತನಾಡಿ ಆರೋಗ್ಯವೇ ಭಾಗ್ಯವಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಸಹಕಾರಿಯಾಗಿದೆ. ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದರು.

ಯೋಗ ಶಿಕ್ಷಕ ಮಹೇಶ್ ಕುಮಾರ್ ಮಾತನಾಡಿ ಅಂತರರಾಷ್ಟಿçÃಯ ಯೋಗ ದಿನಾಚರಣೆ ಪ್ರಯುಕ್ತ ಕಳೆದ 15 ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತರ ರಾಷ್ಟಿçÃಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಲಾಗಿದೆ ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಮಾತನಾಡಿ ಅಂತರರಾಷ್ಟಿçÃಯ 9 ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net