ವಿಶ್ವ ಯೋಗ ದಿನಾಚರಣೆ

New Yoga New
Published on

ಹುಬ್ಬಳ್ಳಿ : ಕನ್ನಡದ ನಂ. 1 ದಿನಪತ್ರಿಕೆ ‘ವಿಜಯವಾಣಿ’ ಮಾಧ್ಯಮ ಸಹಯೋಗದೊಂದಿಗೆ ಯೋಗ ಸ್ಪರ್ಶ ಪ್ರತಿಷ್ಠಾನ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ (ಎಸ್​ಪಿವೈಎಸ್​ಎಸ್) ಹಾಗೂ ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಸಂಯುಕ್ತ ಆಶ್ರಯದಲ್ಲಿ ಜೂ. 21ರಂದು ನಗರದಲ್ಲಿ ವಿಶ್ವ ಯೋಗ ದಿನಾಚರಣೆ ಆಯೋಜಿಸಲಾಗಿದೆ.

ಇಲ್ಲಿನ ಇಂದಿರಾ ಗಾಜಿನ ಮನೆ ಬಳಿಯ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 6.10 ರಿಂದ 7 ಗಂಟೆಯವರೆಗೆ ಯೋಗಾಭ್ಯಾಸ ಹಾಗೂ ಪ್ರಾಣಾಯಾಮ ಹಮ್ಮಿಕೊಳ್ಳಲಾಗಿದೆ. 7 ರಿಂದ 8 ಗಂಟೆಯವರೆಗೆ ಸಭಾ ಕಾರ್ಯಕ್ರಮ ನಡೆಯಲಿದೆ.

ಹು-ಧಾ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ ಅತಿಥಿಯಾಗಿದ್ದು, ವಿಜಯಪುರದ ಕನ್ನೂರ ಶಾಂತಿ ಕುಟಿರದ ಕೃಷ್ಣಾ ಸಂಪಗಾಂವಕರ ಮಹಾರಾಜರು ವಕ್ತಾರರಾಗಿ ಪಾಲ್ಗೊಳ್ಳುವರು. ಎಸ್​ಪಿವೈಎಸ್​ಎಸ್ ಜಿಲ್ಲಾ ಸಂಚಾಲಕ ಗೋಪಾಲಕೃಷ್ಣ ಜೋಶಿ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net