

ಕುಶಾಲನಗರ: ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪೂರ್ವಭಾವಿಯಾಗಿ ಮಕ್ಕಳಿಗೆ ಶನಿವಾರ ತರಬೇತಿ ನೀಡಲಾಯಿತು.
ವಿದ್ಯಾರ್ಥಿಗಳಿಗೆ ವಿವಿಧ ಆಸನಗಳ ಕುರಿತು ಪ್ರಾತಕ್ಷಿಕೆ ಮೂಲಕ ವಿವರಿಸಲಾಯಿತು. ದೈಹಿಕ ಮತ್ತು ಮಾನಸಿಕ ಸ್ವಾಸ್ಥೃಕ್ಕೆ ಯೋಗಾಭ್ಯಾಸ ತುಂಬ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್‌ಹೇಳಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯಾ, ಎಸ್‌ಡಿಎಂಸಿ ಸದಸ್ಯ ಶ್ರೀನಿವಾಸಾಚಾರಿ, ಶಿಕ್ಷಕ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತಾ, ಬಿ.ಡಿ.ರಮ್ಯಾ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ ಇದ್ದರು.