ಸದೃಢ ಆರೋಗ್ಯಕ್ಕೆ ಯೋಗ ಅತ್ಯವಶ್ಯಕ: ಡಾ. ಮಲ್ಲಿಕಾರ್ಜುನ ಉಪ್ಪಿನ

WhatsApp Image 2024-06-13 at 1.52.17 PM
Published on

ಗದಗ: ಕರ್ನಾಟಕ ಸರ್ಕಾರ ಜಿಲ್ಲಾ ಆಡಳಿತ ಗದಗ ಆಯುಷ್ಯ ಮಂದಿರ ಸಮಾಜ ಕಲ್ಯಾಣ ಇಲಾಖೆ ಡಾ. ಬಿ. ಆರ್. ಅಂಬೇಡ್ಕರ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ೧೦ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ಮತ್ತು ಯೋಗೋತ್ಸವ ಕಾರ್ಯಕ್ರಮ ಮತ್ತು ಆಯುಷ್ ಪರಿಚಯ ಕುರಿತು ಕಾರ್ಯಕ್ರಮ ಮಾಡಲಾಯಿತು..
ಈ ಕಾರ್ಯಕ್ರಮವನ್ನು ಡಾ. ಮಲ್ಲಿಕಾರ್ಜುನ ಎಸ್. ಉಪ್ಪಿನ ಗದಗ ಜಿಲ್ಲಾ ಆಯುಷ್ ಅಧಿಕಾರಿಗಳು ಈ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಮಕ್ಕಳಿಂದ ಹಿಡಿದು ವಯೋವೃದ್ಧರವರು ಮಾಡುವ ಸರಳ ಯೋಗವನ್ನು ತಿಳಿಸಿಕೊಡಲಾಗುವುದು. ಆರೋಗ್ಯ ಇದ್ದರೆ ನಾವು ಏನನ್ನಾದರೂ ಸಾಧಿಸಬಲ್ಲೇವು. ಅದಕ್ಕಾಗಿ ಪ್ರತಿದಿನ ತಪ್ಪದೇ ಯೋಗವನ್ನು ಮಾಡಬೇಕು. ಯೋಗದಿಂದ ಜ್ಞಾಪಕ ಶಕ್ತಿ ಹೆಚ್ಚಾಗುವುದು. ಕೇವಲ ಜೂನ್ ೨೧ ರಂದು ಯೋಗದಿನ ಅಂಗವಾಗಿ ಮಾತ್ರ ಮಾಡುವುದು ಅಲ್ಲ ಇದನ್ನು ನಮ್ಮ ಜೀವನದಲ್ಲಿ ದಿನನಿತ್ಯ ಯೋಗಭ್ಯಾಸ ಮಾಡಬೇಕೆಂದು ಕಿವಿ ಮಾತು ಹೇಳಿ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದೆ ಎಂದು ಅತ್ಯಂತ ಹೇಳಿದರು. ಪ್ರತಿ ವರ್ಷ ಯೋಗದಿನವನ್ನು ಆಚರಿಸುತ್ತಿದ್ದು ಈ ವರ್ಷದಿಂದ ಯೋಗೋತ್ಸವ ಎಂಬ ಹತ್ತುದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಇದು ಯೋಗದಿಂದ ಆಗುವ ಪ್ರಯೋಜನ ಬಗ್ಗೆ ತಿಳಿಸುವ ಸಲುವಾಗಿ ಅದಕ್ಕಾಗಿ ಯೋಗ ಶಿಕ್ಷಕರನ್ನು ಶಾಲಾ, ಕಾಲೇಜು, ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಯೋಗದ ತರಬೇತಿಯನ್ನು ಯೋಗ ಶಿಕ್ಷಕರಿಂದ ಕೊಡಲಾಗುತ್ತಿದೆ ಎಂದು ಹೇಳಿದರು.
ಆಯುಷ್ ವೈದ್ಯಾಧಿಕಾರಿಗಳಾದ ಡಾ. ಸಂಜೀವ ನಾರಪ್ಪನವರ ಮಾತನಾಡಿ ಪ್ರತಿದಿನ ಕೇವಲ ಅರ್ಧಗಂಟೆ ಸಮಯವನ್ನು ಈ ಯೋಗಕ್ಕಾಗಿ ಮೀಸಲಿಟ್ಟರೆ ನಾವು ಜೀವನ ಪೂರ್ತಿ ಆರೋಗ್ಯವಂತರಾಗಿ ಇರಬಲ್ಲೆವು ಅತ್ಯಂತ ಮಾರ್ಮಿಕವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಯಶ್ರೀ ಮೇವುಂಡಿ, ಕವಿತಾ, ಪಾರ್ವತಿ, ರೇಣುಕಾ ಕೆಸ್ಠೆ, ಗಂಗಕ್ಕ ಚಕ್ರಣ್ಣವರ, ಡಾ. ಅಶೋಕ ಮತ್ತಿಗಟ್ಟಿ, ಡಾ. ಸಾಯಿಪ್ರಕಾಶ, ಡಾ. ಕಮಲಾಕರ, ಸೇರಿದಂತೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಯೋಗ ತರಬೇತಿದಾರರಾದ ರೇಖಾ ತಿಮ್ಮನಗೌಡ್ರ ಮತ್ತು ಆಯುಷ್ ಸಿಬ್ಬಂದಿಗಳಾದ ಯಲ್ಲರಡ್ಡಿ ಬಸವರಡ್ಡಿಯವರು ಮತ್ತು ಸಲ್ಮಾ ಹಣಗಿ ವಸತಿ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು ಕಾರ್ಯಕ್ರಮ ಯಶಸ್ವಿಗೊಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net