ಯೋಗ ಮಾನಸಿಕ ದೃಢತೆಗೆ ಸಹಕಾರಿ

galibidu shale
Published on

ಮಡಿಕೇರಿ: ನಮ್ಮ ಆರೋಗ್ಯ ರಕ್ಷಣೆಗೆ ಪೂರಕವಾದ ಯೋಗವು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ಓ.ಎಂ.ಪಂಕಜಾಕ್ಷನ್ ಹೇಳಿದರು.


ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಶಿಕ್ಷಕರಿಗೆ ಏರ್ಪಡಿಸಿರುವ ಮೂಲ ತರಬೇತಿ ಮತ್ತು ಮುಂದುವರೆದ ತರಬೇತಿ ಶಿಬಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ದೃಢತೆಗೆ ಸಹಕಾರಿಯಾಗಿದೆ ಎಂದ ಅವರು, ೨೦೧೪ ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ ೨೦೧೫ ರಿಂದ ವಾರ್ಷಿಕವಾಗಿ ಜೂ.೨೧ ರಂದು ವಿಶ್ವದಾದ್ಯಂತ ಯೋಗದ ಅಂತಾರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡಿದೆ ಎಂದರು.


ಜಿಲ್ಲಾ ಸ್ಕೌಟ್ಸ್‌ನ ಆಯುಕ್ತ ಜಿಮ್ಮಿ ಸಿಕ್ವೇರಾ, ಗೈಡ್ಸ್‌ನ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್‌ನ ಸಂಪನ್ಮೂಲ ಶಿಕ್ಷಕ ಕೆ.ಯು.ರಂಜಿತ್, ಶಿವಶಂಕರಪ್ಪ, ಟಿ.ಬಿ.ಕುಮಾರಸ್ವಾಮಿ, ಗೈಡ್ಸ್‌ನ ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಮೈಥಿಲಿರಾವ್, ಭೋಜಮ್ಮ, ವೀಣಾ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಇತರರು ಇದ್ದರು.


ಸಂಪನ್ಮೂಲ ಶಿಕ್ಷಕಿಯರಾದ ಉಷಾರಾಣಿ ಮತ್ತು ಓಮನ ಅವರು ಶಿಕ್ಷಕರಿಗೆ ಯೋಗದ ವಿವಿಧ ಆಸನಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ತರಬೇತಿ ನಿರತ ಶಿಕ್ಷಕರು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net