ಜ್ಞಾನ ಮತ್ತು ಆರೋಗ್ಯ ವೃದ್ಧಿಗೆ ಯೋಗ ಸಹಕಾರಿ

22 ckm 4
ಚಿಕ್ಕಮಗಳೂರು ಜಿಲ್ಲೆಯ ಬಿಳೇಕಲ್ಲಹಳ್ಳಿಯಲ್ಲಿ ಲಯನ್ಸ್ ಕ್ಲಬ್ ಹಾಗೂ ಸ್ಥಳೀಯ ಗ್ರಾಪಂನಿAದ ಆಯೋಜಿಸಲಾಗಿದ್ದ ಅಂತಾರಾಷ್ಟಿçÃಯ ಯೋಗ ದಿನಾಚರಣೆಯನ್ನು ಗ್ರಾಪಂ ಅಧ್ಯಕ್ಷ ಭಾನುಪ್ರಕಾಶ್ ಉದ್ಘಾಟಿಸಿದರು. ರಮೇಶ್, ರೇಣುಕಮ್ಮ, ಎಚ್.ಆರ್.ಹರೀಶ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಪ್ರತಿದಿನ ಕನಿಷ್ಠ ಅರ್ಧಗಂಟೆ ಕಾಲ ಯೋಗಾಭ್ಯಾಸ ಮಾಡುವುದರಿಂದ ಮಕ್ಕಳಲ್ಲಿ ಜ್ಞಾನ ಏಕಾಗ್ರತೆ ಮತ್ತು ಆರೋಗ್ಯ ವೃದ್ಧಿಸುತ್ತದೆ ಎಂದು ಚಿಕ್ಕಮಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಯೋಗ ಶಿಕ್ಷಕ ಜಿ. ರಮೇಶ್ ತಿಳಿಸಿದರು.

ಸಖರಾಯಪಟ್ಟಣ ಸಮೀಪದ ಬಿಳೇಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಲಯನ್ಸ್ ಕ್ಲಬ್, ಬಿಳೇಕಲ್ಲಹಳ್ಳಿ ಗ್ರಾಪಂ ಮತ್ತು ಆಯುಷ್ ಇಲಾಖೆಯಿಂದ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನುz್ದೆÃಶಿಸಿ ಮಾತನಾಡಿದ ಅವರು, ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಪ್ರತಿ ದಿನ ಯೋಗ ಮಾಡುವುದರಿಂದ ಮನುಷ್ಯನ ಮಾನಸಿಕ ಮತ್ತು ಶಾರೀರಿಕ ಸದೃಢತೆಗೆ ಸಹಕಾರಿಯಾಗಲಿದೆ. ದೇಹ ಮತ್ತು ಮನಸ್ಸಿನಲ್ಲಿರುವ ಕಲ್ಮಷಗಳನ್ನು ದೂರ ಮಾಡುತ್ತದೆ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಮಾಜಿ ರಾಜ್ಯಪಾಲ ಎಚ್.ಆರ್.ಹರೀಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೋಜು, ಮಸ್ತಿ ಹೆಸರಿನಲ್ಲಿ ಯುವಜನತೆ ದುಶ್ಚಟಗಳಿಗೆ ಬಲಿಯಾಗುತ್ತಿರುವು ಅತ್ಯಂತ ವಿಷಾಧಕಾರಿ ಸಂಗತಿ. ವಿದ್ಯಾವಂತ ಯುವಜನತೆ ದುಶ್ಚಟಗಳಿಂದ ದೂರವಿರಲು ಯೋಗಭ್ಯಾಸ ರೂಢಿಸಿಕೊಳ್ಳಬೇಕು ಎಂದರು.
ಬಿಳೇಕಲ್ಲಹಳ್ಳಿ ಗ್ರಾಪಂ ಅಧ್ಯಕ್ಷ ಅಧ್ಯಕ್ಷ ಭಾನುಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೇಣುಕಮ್ಮ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಗಂಗಾಧರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಚೇತನ್, ಗ್ರಾಪಂ ಮಾಜಿ ಅಧ್ಯಕ್ಷ ಗೋಪಿಕೃಷ್ಣ, ಆಯುಷ್ ಅಧಿಕಾರಿ ಹೇಮಲತಾ, ಪಿಡಿಒ ಲೀಲಾವತಿ, ಪ್ರಮುಖರಾದ ಡಾ. ಪ್ರಕಾಶ್, ರವಿಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net