ಯೋಗ ಎಲ್ಲರನ್ನೂ ಒಗ್ಗೂಡಿಸುವ ಮಾರ್ಗ

shimogga yoga dasara
ಯೋಗ ದಸರಾ ಅಂಗವಾಗಿ ಕುವೆಂಪು ರಂಗಮಂದಿರ ಆವರಣದಲ್ಲಿ ಯೋಗಾಭ್ಯಾಸ ಮಾಡುತ್ತಿರುವುದು.
Published on

ಶಿವಮೊಗ್ಗ: ಯೋಗ ಎಲ್ಲರನ್ನೂ ಒಗ್ಗೂಡಿಸುವ ಒಂದು ಮಾರ್ಗ. ಪ್ರತಿದಿನ ನಾವು ಯೋಗ ಮಾಡುವ ಮೂಲಕ ಸಹಬಾಳ್ವೆಯಿಂದ ಬದುಕಲು ಸಾಧ್ಯ ಎಂದು ಜಗತ್ತಿಗೆ ತೋರಿಸಿಕೊಟ್ಟ ಹೆಮ್ಮೆಯ ದೇಶ ಭಾರತ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು.

ಕುವೆಂಪು ರಂಗಮಂದಿರದಲ್ಲಿ ಯೋಗ ದಸರಾ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದರು.

ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನೂ ಅದ್ದೂರಿಯಾಗಿ ಯೋಗ ದಸರಾ ಮಾಡಬೇಕಾಗುತ್ತದೆ. ಸಾಕಷ್ಟು ಜನ ಆಸಕ್ತಿ ತೋರಿಸುತ್ತಿರುವುದು ನಮಗೂ ಉತ್ಸಾಹ ತಂದಿದೆ. ಎಲ್ಲರೂ ಪ್ರತಿನಿತ್ಯ ಯೋಗ ಮಾಡುವಂತೆ ಸಲಹೆ ನೀಡಿದರು.

ಬೆಂಗಳೂರಿನ ಡಾ. ಸುಬ್ರಹ್ಮಣ್ಯನ್ ಮಾತನಾಡಿ, ಪ್ರತಿದಿನ ಯೋಗ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎಂದರು. ಶ್ರೀ ರಾಘವೇಂದ್ರ ಯೋಗ ಕೇಂದ್ರದ ಗೋಪಾಲಕೃಷ್ಣ ಅವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ನಂತರ ಶ್ರೀ ಶಿವಗಂಗಾ ಯೋಗ ಕೇಂದ್ರದ ಗುರು ಸಿ.ವಿ.ರುದ್ರಾರಾಧ್ಯ ಪ್ರಾಣಾಯಾಮ ತರಗತಿ ನಡೆಸಿಕೊಟ್ಟರು. ಕಣಾದ ಯೋಗ ಕೇಂದ್ರದ ಗುರು ಅನಿಲ್ಕುಮಾರ್ ಶೆಟ್ಟರ್ ಧ್ಯಾನ ಕಾರ್ಯಕ್ರಮ ನಡೆಸಿಕೊಟ್ಟರು.

ನಂಜಪ್ಪ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಭಾಗವಹಿಸಿದ ಎಲ್ಲರಿಗೂ ಮಹಾನಗರ ಪಾಲಿಕೆ ಟಿ-ಶರ್ಟ್ ಮತ್ತು ಉಪಾಹಾರದ ವ್ಯವಸ್ಥೆ ಮಾಡಿತ್ತು. ಯೋಗ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಯೋಗ ಗುರುಗಳಾದ ಭಾ.ಮ.ಶ್ರೀಕಂಠ, ಅರವಿಂದ, ರಾಜಶೇಖರ್, ಡಾ. ಸಂಜಯ್, ಬೆಳಗೂರು ಮಂಜುನಾಥ, ವೈದ್ಯನಾಥ್, ಓಂಕಾರ್, ಜಗದೀಶ್, ವಿಜಯಾ, ಬಸವರಾಜ್, ಮಂಜುಳಾ, ಶುಭದಾ ಹೆಗಡೆ, ಜಿ.ವಿಜಯಕುಮಾರ್, ಡಾ. ನಾಗರಾಜ್ ಪರಿಸರ, ಮಹಾನಗರ ಪಾಲಿಕೆಯ ಸುಧಾಕರ್ ಬಿಜೂರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net