

ವಿಜಯವಾಣಿ ಸುದ್ದಿಜಾಲ ಧಾರವಾಡ
ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ ಆಂತರಿಕ ಸೌಂದರ್ಯವೂ ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವೈದ್ಯ ಡಾ. ಅನಿರುದ್ಧ ಕುಲಕರ್ಣಿ ಹೇಳಿದರು.
ನಗರದ ಕ್ಲಾಸಿಕ್ ಶೈಕ್ಷಣಿಕ ಮತ್ತು ಸಾಂಸತಿಕ ಅಭಿವೃದ್ಧಿ ಸಂಸ್ಥೆಯ ಕ್ಲಾಸಿಕ್ ಇಂಟರ್ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಯೋಗ ದಿನ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರತಿ ವರ್ಷ ಜೂ. 21ರಂದು ವಿಶ್ವ ಯೋಗ ದಿನ ಆಚರಿಸಲಾಗುತ್ತದೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪಕಿರ್ಸುವ ಪ್ರಾಚಿನ ಕಲೆಯಾಗಿದೆ. ಇದು ಭಾರತವು ಜಗತ್ತಿಗೆ ನೀಡಿದ ಕೊಡುಗೆಯಾಗಿದೆ ಎಂದರು.
ಶಾಲೆ ಪ್ರಾಚಾರ್ಯ ಮನೋಹರ ಕೆಂಚರಾಹುತ ಮಾತನಾಡಿ, ಇಂದು ಯೋಗ ಹಾಗೂ ಸುಂಗೀತ ದಿನವನ್ನು ಒಂದೇ ಸಮಯದಲ್ಲಿ ಆಚರಿಸುತ್ತಿರುವುದು ನಮ್ಮ ಸುಯೋಗ. ಯೋಗವು ಮನಸ್ಸು ಮತ್ತು ಮನುಷ್ಯನ ನಡುವೆ ಸಾಮರಸ್ಯ ಉಂಟು ಮಾಡುತ್ತದೆ ಎಂದರು.
ಕ್ಲಾಸಿಕ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ ಉಪ್ಪಾರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಾಧ್ಯಾಪಕಿ ಸಂಧ್ಯಾರಾಣಿ, ಶೈಕ್ಷಣಿಕ ಸಂಯೋಜಕರು, ಸಿಬ್ಬಂದಿ, ಇತರರು ಇದ್ದರು.