ಬೌದ್ಧಿಕ ಬೆಳವಣಿಗೆಗೆ ಯೋಗ ಸಹಕಾರಿ

mdr
ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗದಲ್ಲಿ) ನಂ. 1 ಕನ್ನಡ ದಿನ ಪತ್ರಿಕೆ ವಿಜಯವಾಣಿ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಯೋಗ ಗುರು ಬಿ.ವಿ.ಹಳ್ಳಿನಾರಾಯಣ್ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಿದರು.
Published on

ಮದ್ದೂರು: ನಿರಂತರವಾಗಿ ಯೋಗಾಭ್ಯಾಸ ಮಾಡುವುದರಿಂದ ವಿದ್ಯಾರ್ಥಿಗಳಿಗೆ ದೈಹಿಕ, ಭಾವನಾತ್ಮಕ ಮತ್ತು ಬೌದ್ಧಿಕ ಬೆಳವಣಿಗೆ ಉಂಟಾಗಿ ಮಕ್ಕಳಿಗೆ ವಿವಿಧ ವ್ಯಕ್ತಿತ್ವ ಗುಣಲಕ್ಷಣಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ ಎಂದು ಯೋಗ ಗುರು ಹಾಗೂ ಸಾಹಿತಿ ಬಿ.ವಿ.ಹಳ್ಳಿ ನಾರಾಯಣ್ ತಿಳಿಸಿದರು.

ತಾಲೂಕಿನ ಕೆ.ಹೊನ್ನಲಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗದಲ್ಲಿ) ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಯೋಗ ಮಾಡುವುದರಿಂದ ಪ್ರತಿಯೊಬ್ಬರಲ್ಲೂ ಹೆಚ್ಚು ಧನಾತ್ಮಕ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ. ಯೋಗವನ್ನು ನಿಯಮಿತವಾಗಿ ಅಭ್ಯಾಸ ಮಾಡುವ ವ್ಯಕ್ತಿಯು ಹೆಚ್ಚು ಆತ್ಮವಿಶ್ವಾಸ ಹಾಗೂ ಆರೋಗ್ಯವಂತನಾಗಿರುತ್ತೇನೆ ಎಂದರು.

ಯೋಗಾಭ್ಯಾಸವು ಒಟ್ಟಾರೆ ಮಾನಸಿಕ ಆರೋಗ್ಯಕ್ಕೆ ಅಸಂಖ್ಯಾತ ರೀತಿಯಲ್ಲಿ ಸಹಾಯ ಮಾಡುತ್ತದೆ. ಯೋಗ, ಕ್ರಿಯಾ, ಆಸನ, ಪ್ರಾಣಾಯಾಮ ಮತ್ತು ಧ್ಯಾನವನ್ನು ಸತತವಾಗಿ ಮಾಡುವ ಮೂಲಕ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ಅಸಾಧಾರಣ ಮಟ್ಟದ ಮಾನಸಿಕ ಸ್ಪಷ್ಟತೆ ಮತ್ತು ಶಾಂತತೆಯನ್ನು ಬೆಳೆಸಿಕೊಳ್ಳಬಹುದು ಎಂದರು.

ಯೋಗ ಗುರು ಬಿ.ವಿ.ಹಳ್ಳಿನಾರಾಯಣ್ ಅವರು ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಆಸನಗಳ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಆಸಕ್ತಿಯಿಂದ ಯೋಗವನ್ನು ಮಾಡಿ ಎಲ್ಲರ ಗಮನ ಸೆಳೆದರು.

ಉಪ ಪ್ರಾಂಶುಪಾಲ ಎಸ್.ಚಂದ್ರಶೇಖರ್ ಮಾತನಾಡಿ, ವಿಜಯವಾಣಿ ಪತ್ರಿಕೆ ಇಂತಹ ಹಲವಾರು ಜನಮುಖಿ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ರಾಜ್ಯದ ಜನರ ಮನಗೆದ್ದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಉಪ ಪ್ರಾಂಶುಪಾಲ ಎಸ್ ಚಂದ್ರಶೇಖರ್, ಶಿಕ್ಷಕರಾದ ಆರ್, ಚೇತನ, ರೂಪರಶ್ಮಿ, ಅನ್ನಪೂರ್ಣ, ರಂಜಿತಾ, ಮಹಮದ್ ರಫೀಕ್, ಡಂಬಳ ಕಾರ್ತಿಕ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net