ದೇಶದ ಪುರಾತನದ ಸಂಕೇತ ಯೋಗ

23 HKR 04
Published on

ಹಿರೇಕೆರೂರ: ಯೋಗವು ನಮ್ಮ ದೇಶ ಪುರಾತನದ ಸಂಕೇತ. ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತ ಅತ್ಯಂತ ಆಘಾತಕಾರಿ. ಇದನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ನಿತ್ಯ ಯೋಗವನ್ನು ಕಡ್ಡಾಯವಾಗಿ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಸಿಇಎಸ್ ವಿದ್ಯಾಸಂಸ್ಥೆಯ ಸರ್ವಜ್ಞ ಸಾಂಸ್ಕೃತಿಕ ಭವನದಲ್ಲಿ ವಿಶ್ವ ಯೋಗ ದಿನಾಚರಣೆ ನಿಮಿತ್ತ ಭಾನುವಾರ ಏರ್ಪಡಿಸಿದ್ದ ಯೋಗ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯೋಗಾಭ್ಯಾಸದಿಂದ ಉತ್ತಮ ಆರೋಗ್ಯ ಪಡೆಯಬಹುದು. ರೋಗಮುಕ್ತ ಸಮಾಜ ನಿರ್ಮಿಸಲು ಇದು ಅತ್ಯಂತ ಪರಿಣಾಮಕಾರಿಯಾಗಿದೆ ಎಂದರು.

ಸಂಸ್ಥೆಯ ಆಡಳಿತಾಧಿಕಾರಿ ಎಸ್. ವೀರಭದ್ರಯ್ಯ, ಬಿಇಒ ಎನ್. ಶ್ರೀಧರ್, ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ಅಧ್ಯಕ್ಷ ಎಸ್.ಬಿ. ತಿಪ್ಪಣ್ಣನವರ, ಗೌರವಾಧ್ಯಕ್ಷ ಎಸ್.ಎಸ್. ಪಾಟೀಲ ಮಾತನಾಡಿದರು.

ದುರ್ಗಾದೇವಿ ಯೋಗ ಸಮಿತಿ ಅಧ್ಯಕ್ಷ ಶಂಭಣ್ಣ ತಂಬಾಕದ, ಉಪಾಧ್ಯಕ್ಷ ಪ್ರಕಾಶ ಶಿರಗಂಬಿ, ಸಂಸ್ಥೆ ಉಪಾಧ್ಯಕ್ಷ ಎಂ.ವಿ. ಹೊಂಬರಡಿ, ಜೆ.ಬಿ. ತಂಬಾಕದ, ಇತರರು ಇದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ರಾಜಶೇಖರ ಕರೆಗೌಡರ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net