

ಶಂಕರನಾರಾಯಣ: ಯೋಗವೆಂದರೆ ಕೇವಲ ಆಸನಗಳು ಮತ್ತು ಪ್ರಾಣಾಯಾಮ ವಾತ್ರವಲ್ಲ. ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ ಮತ್ತು ಸವಾಧಿ ಎಂಬ ಎಂಟು ಹಂತಗಳನ್ನೊಳಗೊಂಡ ಜೀವನ ಶೈಲಿಯಾಗಿದೆ. ಕೇವಲ ದೈಹಿಕ ಸದೃಢತೆಯಲ್ಲದೆ ವಾನಸಿಕವಾಗಿಯೂ ಮನುಷ್ಯನನ್ನು ಸದೃಢವಾಗಿಸುವಲ್ಲಿ ಯೋಗ ಸಹಕಾರಿಯಾಗಿದೆ ಎಂದು ಚಿತ್ತೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ಅನುಲೇಖಾ ಬಾಯರಿ ಹೇಳಿದರು.
ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಗಿರೀಶ್ ಶಾನುಭೋಗ್, ಸ್ನಾತಕೋತ್ತರ ಸಂಯೋಜಕಿ ಪ್ರಜ್ಞಾ ಉಪಸ್ಥಿತರಿದ್ದರು. ಶಿಲ್ಪಾ ಸ್ವಾಗತಿಸಿದರು. ಅಶ್ವಿನಿ ವಂದಿಸಿದರು. ಸಾಧನಾ ನಿರೂಪಿಸಿದರು.