

ಮಂಗಳೂರು : ಯೋಗಾಭ್ಯಾಸ ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಹೇಳಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಪತ್ರಕರ್ತರಿಗೆ ಹಾಗೂ ಅವರ ಕುಟುಂಬದವರಿಗೆ ಆಯೋಜಿಸಿದ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ ಯೋಗ ಶಿಕ್ಷಣ ಮತ್ತು ಧ್ಯಾನದಿಂದ ಭಾರತಕ್ಕೆ ಜಾಗತಿಕವಾಗಿ ಇಂದು ವಿಶೇಷ ಸ್ಥಾನಮಾನ ದೊರೆತಿದೆ ಎಂದರು.
ಯೋಗ ಶಿಕ್ಷಕಿ ದೇವಿಕಾ ಪುರುಷೋತ್ತಮ್ ಮಾತನಾಡಿ ದಿನಪೂರ್ತಿಯ ಒತ್ತಡದ ಮಧ್ಯೆ ಕಾರ್ಯ ನಿರ್ವಹಿಸುವ ಪತ್ರಕರ್ತರು ಕನಿಷ್ಠ ಒಂದು ಗಂಟೆಯ ಯೋಗಾಭ್ಯಾಸ ನಡೆಸಿದರೆ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರಲಿದೆ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.
ಜೂನ್ 12 ರಿಂದ 24ರವರೆಗೆ ಪ್ರತೀ ದಿನ ಬೆಳಗ್ಗೆ 6ರಿಂದ 7ರವರೆಗೆ ಪತ್ರಿಕಾಭವನದಲ್ಲಿ ಪತ್ರಕರ್ತರಿಗೆ ಉಚಿತ ಯೋಗ ತರಬೇತಿ ಶಿಬಿರ ನಡೆಯಲಿದೆ