ಮೈಸೂರಿನಲ್ಲಿ ಅ.9 ರಿಂದ 12ರವರೆಗೆ ಯೋಗ ಕ್ರೀಡಾ ಚಾಂಪಿಯನ್‌ಶಿಪ್

mysore
Published on

ಮೈಸೂರು: ಭಾರತೀಯ ಯೋಗ ಒಕ್ಕೂಟ ವತಿಯಿಂದ ಅ.9 ರಿಂದ 12ರವರೆಗೆ ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಯೋಗ ಕ್ರೀಡಾ ಚಾಂಪಿಯನ್‌ಶಿಪ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಅಗರ್ವಾಲ್ ತಿಳಿಸಿದರು.

ದೇಶದ ವಿವಿಧೆಡೆಯಿಂದ 590 ಯೋಗ ಪಟುಗಳು ಪಾಲ್ಗೊಳ್ಳಲಿದ್ದಾರೆ. 145 ಆಕರ್ಷಕ ಯೋಗ, ಜೋಡಿ ಯೋಗ, ರಿದಮಿಕ್ ಯೋಗ ಮತ್ತು ಫ್ರೀ ಫ್ಲೋ ಯೋಗ ಸ್ಪರ್ಧೆ ಆಯೋಜಿಸಲಾಗಿದೆ. 175 ರಾಷ್ಟ್ರೀಯ ಯೋಗ ನಿರ್ಣಾಯಕರು ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅ.9 ರಂದು ಬೆಳಗ್ಗೆ 10ಕ್ಕೆ ಶ್ರೀ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಉದ್ಘಾಟನ ಸಮಾರಂಭ ಆಯೋಜಿಸಲಾಗಿದೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಟಿ.ಎಸ್. ಶ್ರೀವತ್ಸ, ಜಿ.ಟಿ. ದೇವೇಗೌಡ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಅ. 12 ರಂದು ಬೆಳಗ್ಗೆ 10ಕ್ಕೆ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಶ್ರೀ ಅವಧೂತ ದತ್ತ ಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವ್ಥಾನದ ಡಾ. ಭಾಷ್ಯಂ ಸ್ವಾಮೀಜಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಅಭಿನವ್ ಜೋಶಿ, ಡಾ. ಗಣೇಶ್‌ಕುಮಾರ್, ಜಿ.ಎಸ್. ಕೃಷ್ಣಮೂರ್ತಿ, ಶಶಿಕುಮಾರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net