

ನಾಪೋಕ್ಲು: ಹೊದ್ದೂರು ಗ್ರಾಮ ಪಂಚಾಯಿತಿಯ ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯುಷ್ಮಾನ್ ಇಲಾಖೆ ವತಿಯಿಂದ ಯೋಗ ತರಬೇತಿ ಕಾರ್ಯಾಗಾರ ಗುರುವಾರ ಜರುಗಿತು.
ಯೋಗ ಗುರು ಕೌಶಿಕ್ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿ, ಉಪಯೋಗಗಳ ಬಗ್ಗೆ ವಿವರಿಸಿದರು. ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ, ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಾಲೆಯ ಶಿಕ್ಷಕರು ಇದ್ದರು.