‘ಒನ್ ಅರ್ಥ್, ಒನ್ ಹೆಲ್ತ್’ ತತ್ವದಡಿ ಯೋಗ

22.,npk ,1
Published on

 ನಾಪೋಕ್ಲು: ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಎನ್‌ಸಿಸಿ ಸಂಯುಕ್ತಾಶ್ರಯದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಫಾರ್ ಒನ್ ಅರ್ಥ್, ಒನ್ ಹೆಲ್ತ್ ಎಂಬ ತತ್ವದಡಿಯಲ್ಲಿ ಯೋಗಾಸನ ಕಾರ್ಯಕ್ರಮ ನಡೆಸಲಾಯಿತು.

ಮೂರ್ನಾಡು ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ತೇಜಸ್ ಅವರು ಯೋಗಾಸನದ ಮಹತ್ವ ತಿಳಿಸಿ, ಯೋಗಾಸನದ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ, ಪ್ರಾಣಾಯಾಮ, ವೃಕ್ಷಾಸನ ಚಕ್ರಾಸನ, ಶವಾಸನ ಮುಂತಾದ ಆಸನಗಳನ್ನು ಪ್ರದರ್ಶಿಸಿದರು.

ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ ವಿದ್ಯಾಸಂಸ್ಥೆಯ ಖಜಾಂಚಿ ಯತೀಶ್ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಶ್ಮಿ, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ದಮಯಂತಿ ಎನ್‌ಸಿಸಿ ಅಧಿಕಾರಿ , ಕಾವೇರಪ್ಪ ಹಾಗೂ ವಿದ್ಯಾಸಂಸ್ಥೆಯ ಎಲ್ಲ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net