

ಮಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂ.21ರಂದು ಮಧ್ಯಾಹ್ನ 3ಕ್ಕೆ ಸೋಮೇಶ್ವರ ಕಡಲ ತೀರದಲ್ಲಿ ಯೋಗ ವಿತ್ ಯೋಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಪ್ರತೀ ವರ್ಷ ಯೋಗ ವಿತ್ ಯೋಧಕಾರ್ಯಕ್ರಮವನ್ನು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಆಯೋಜಿಸಲಾಗುತ್ತಿದೆ. ಕಳೆದ ಬಾರಿ ಸಾಹಸ ಜಲಕ್ರೀಡೆಗಳ ತಾಣವಾಗಿರುವ ಸಸಿಹಿತ್ಲುವಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಕಡಲ ಕಿನಾರೆಯಲ್ಲಿ ಯೋಗಾಭ್ಯಾಸ ನಡೆಸಲು ಸಿದ್ದತೆ ನಡೆಸಲಾಗಿದೆ . ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧಕರು, ಕ್ರೀಡಾಪಟುಗಳು, ಮಾಜಿ ಸೈನಿಕರು, ಜೀವರಕ್ಷಕರು,
ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿಲಿದ್ದು, ಸಾರ್ವಜನಿಕರು ಪಾಲ್ಗೊಳ್ಳುವಂತೆ ಕ್ಯಾ.ಚೌಟ ವಿನಂತಿಸಿದ್ದಾರೆ.