ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆದ ಯೋಗಾಭ್ಯಾಸದಲ್ಲಿ ನೂರಾರು ಯೋಗಾಸಕ್ತರು ಭಾಗವಹಿಸಿದ್ದರು. ಈ ಬಾರಿಯ ವಿಶ್ವ ಯೋಗ ದಿನದ ಧ್ಯೇಯವಾಕ್ಯವಾದ ಆರೋಗ್ಯಕರ ವಯಸ್ಸಿಗೆ ಯೋಗ ಪರಿಕಲ್ಪನೆಗೆ ಪೂರಕವಾಗಿ, ಪ್ರಖ್ಯಾತ ಯೋಗಪಟು ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನ ಹಾಗೂ ಪ್ರಾಣಾಯಾಮ ಪ್ರದರ್ಶಿಸಲಾಯಿತು. ವಿದ್ಯಾರ್ಥಿಗಳು, ಯುವಕರು, ನಟ-ನಟಿಯರು ಹಾಗೂ ಸಾರ್ವಜನಿಕರು ಒಂದೇ ವೇದಿಕೆಯಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯದ ಮಹತ್ವವನ್ನು ಸಾರಿದರು.