ಬೆಳಗಾವಿ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆ

web 2
Published on

ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೋಂದಾಯಿತ ಕರ್ನಾಟಕ ಯೋಗಾಸನಾ ಕ್ರೀಡಾ ಸಂಸ್ಥೆ ಮತ್ತು ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ಕೇಂದ್ರದ ಸಹಯೋಗದಲ್ಲಿ ಬೆಳಗಾವಿ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಆ. 13ರಂದು ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಯೋಗ ಸ್ಪರ್ಧೆ ಜರುಗಲಿದೆ. ಜಿಲ್ಲೆಯ ಯೋಗಪಟುಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಮಾಹಿತಿಗೆ ಜಿಲ್ಲಾ ಯೋಗ ಸಂಯೋಜಕ ಡಾ. ಪ್ರಕಾಶ ಪವಾಡಶೆಟ್ಟಿ ಅವರನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net