15 ರಂದು ನಗರದಲ್ಲಿ ಯೋಗಥಾನ್

34
Published on

ಮೈಸೂರು: ನಗರದ ರೇಸ್‌ಕೋರ್ಸ್ ಮೈದಾನದಲ್ಲಿ ಜ.15 ರಂದು ಬೆಳಗ್ಗೆ ಯೋಗಥಾನ್ ಆಯೋಜಿಸಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಗಥಾನ್ ಕಾರ್ಯಕ್ರಮದಲ್ಲಿ 80 ಸಾವಿರ ಜನ ಭಾಗವಹಿಸುವಂತೆ ಗುರಿ ನಿಗದಿಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಡಿಡಿಡಿ.ಟಜಠಿಟ್ಞ2022.್ಚಟಞ ಮೂಲಕ ಜನರನ್ನು ನೋಂದಣಿ ಮಾಡಿಸಬೇಕು ಎಂದರು.


ಶಾಲಾ, ಕಾಲೇಜು, ವಸತಿ ಶಾಲೆಗಳಿಂದ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಕರೆದುಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪಾರ್ಕಿಂಗ್, ಕುಡಿಯುವ ನೀರು, ಶೌಚಗೃಹ, ವೇದಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆ ಉತ್ತಮವಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಶಿಷ್ಠಾಚಾರ, ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆಗೆ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ವೇದಿಕೆ, ಸ್ವಚ್ಛತೆ ,ಉಪಹಾರ ಹಾಗೂ ಆಂಬುಲೆನ್ಸ್ ವ್ಯವಸ್ಧೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಆದಷ್ಟು ಚಿಕ್ಕ ಮಕ್ಕಳು ಯೋಗ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ನೋಡಿಕೊಳ್ಳಿ ಎಂದು ಅವರು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net