ವಿನಯ್​ ಕುಲಕರ್ಣಿ ಪರ ಸುರ್ಜೇವಾಲ ಬ್ಯಾಟಿಂಗ್​

Vinay Kulkarni Ranjeep Singh Surjewala
Published on

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್​ನಲ್ಲಿ ಸಿಬಿಐ ಬಂಧನಕ್ಕೊಳಪಟ್ಟಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಪರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೇವಾಲ ನಿಂತಿದ್ದಾರೆ.

ಸಿಬಿಐ ಅನ್ನು ಬಿಜೆಪಿ ಸರ್ಕಾರ ಕೈಗೊಂಬೆ ಮಾಡಿಕೊಂಡಿದೆ. ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪಿತೂರಿ. ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ ಮತ್ತು ಇಡಿ ಬಳಸಿಕೊಂಡು ಡಿ.ಕೆ.ಶಿವಕುಮಾರ್​, ಡಾ.ಜಿ.ಪರಮೇಶ್ವರ, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ. ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಿವೆ ಎಂದು ಬಿಜೆಪಿಗೆ ಸುರ್ಜೇವಾಲ ಎಚ್ಚರಿಸಿದ್ದಾರೆ.

ವಿನಯ್​ ಕುಲಕರ್ಣಿ ಬಂಧನ ಕುರಿತು ಅರಣಿ ಟ್ವೀಟ್​ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಸುರ್ಜೇವಾಲ, 'ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿಯನ್ನು ಬಂಧಿಸಿದೆ. ಇದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಕೊಲೆ ಕೇಸ್​ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್​ ಮುಖಂಡ ವಿನಯ್ ಕುಲಕರ್ಣಿ ಸದ್ಯ ಸಸಿಬಿಐ ಕಸ್ಟಡಿಯಲ್ಲಿದ್ದಾರೆ. ಯೋಗೀಶ್ ಗೌಡರ ಕೊಲೆ ಕೇಸ್​ನಲ್ಲಿ ವಿನಯ್​ ಕುಲಕರ್ಣಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪದ ಮೇರೆಗೆ ನ.5ರ ಬೆಳಗ್ಗೆ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net