

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಹತ್ಯೆ ಹಿನ್ನೆಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷ್ಯನಾಶ ಕೇಸ್ ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಶಿಫ್ಟ್ ಮಾಡಲಾಗಿದೆ.
ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯವು ಸೋಮವಾರ(ಫೆ.15)ಆದೇಶ ಹೊರಡಿಸಿದೆ. ಯೋಗೀಶಗೌಡ ಹತ್ಯೆ ಕೇಸ್ನಲ್ಲಿ ಕಳೆದ ನವೆಂಬರ್ನಲ್ಲಿ ಸಿಬಿಐ ಪೊಲೀಸರಿಂದ ವಿನಯ್ ಕುಲಕರ್ಣಿಯನ್ನು ಬಂಧಿಸಲಾಗಿದ್ದು, ಸದ್ಯ ಮಾಜಿ ಸಚಿವರು ಹಿಂಡಲಗಾ ಜೈಲಿನಲ್ಲಿದ್ದಾರೆ.
2016ರ ಜೂನ್ 15ರಂದು ತನ್ನದೇ ಮಾಲೀಕತ್ವದ ಉದಯ್ ಜಿಮ್ನಲ್ಲಿ ಯೋಗೀಶ್ ಗೌಡ ಬರ್ಬರವಾಗಿ ಹತ್ಯೆಯಾಗಿದ್ದರು. ಯೋಗೀಶ್ ಗೌಡರ ಕೊಲೆ ಕೇಸ್ನಲ್ಲಿ ಕೈವಾಡವಿರುವ ಮತ್ತು ಪ್ರಭಾವ ಬಳಸಿ ಕೇಸು ಮುಚ್ಚಿ ಹಾಕಿರುವ ಆರೋಪವನ್ನು ವಿನಯ್ ಕುಲಕರ್ಣಿ ಎದುರಿಸುತ್ತಿದ್ದಾರೆ.