

ಧಾರವಾಡ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡರ ಕೊಲೆ ಕೇಸ್ನಲ್ಲಿ ಸಿಬಿಐ ಪೊಲೀಸರಿಂದ ನ.5ರಂದು ಬಂಧನಕ್ಕೊಳಪಟ್ಟಿದ್ದ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಮತ್ತೆ 14 ದಿನ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೋಮವಾರ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 21 ರವರೆಗೆ ವಿಸ್ತರಿಸಿದೆ.